ಬೆಂಗಳೂರು, ಮಾ. 24 (DaijiworldNews/HR): "ನನ್ನ ಹೇಳಿಕೆಯನ್ನು ಶಬ್ದಶಃ ಅರ್ಥೈಸದೆ, ನಮ್ಮ ಸ್ಥಾನದಲ್ಲಿ ನಿಂತು, ಅದರ ಹಿಂದಿರುವ ಆಘಾತ, ವೇದನೆ, ಭಾವನೆಗಳನ್ನು ಅವಲೋಕಿಸಿ, ಅರ್ಥ ಮಾಡಿಕೊಳ್ಳಬೇಕೆಂದು ನಿವೇದನೆ ಮಾಡಿಕೊಳ್ಳುತ್ತೇನೆ" ಎಂದು ಸಚಿವ ಸುಧಾಕರ್ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾದಿರುವ ಅವರು, "6 ಜನ ಮಂತ್ರಿಗಳ ವಿರುದ್ಧ ನಿರಂತರ ಶಂಕೆ, ಆರೋಪ ಮಾಡುತ್ತಿರುವಾಗ ಅವರಿಗಾಗಿರಬಹುದಾದ ಅವಮಾನ, ಮಾನಸಿಕ, ಭಾವನಾತ್ಮಕ ನೋವು ಅರಿವಾಗಲಿಲ್ಲ. ಆದರೆ ಎಲ್ಲರೂ ಆತ್ಮಾವಲೋಕನ ಮಾಡಿಕೊಳ್ಳಬೇಕು ಎನ್ನುವ ನನ್ನ ಹೇಳಿಕೆ ಕೆಲವರಿಗೆ ಬಹಳ ತಪ್ಪಾಗಿ ಕಾಣುತ್ತಿದೆ" ಎಂದರು.
ಇನ್ನು "ಕೆಲ ದಿನಗಳಿಂದ ಮಹತ್ವವಾಗಿರುವ ರಾಜ್ಯ ಬಜೆಟ್ ಅಧಿವೇಶನದಲ್ಲಿ ಕಲಾಪ ನಡೆಯಲು ಬಿಡದೆ ಅನಾವಶ್ಯಕ ವಿಚಾರಗಳನ್ನು ಪ್ರಸ್ತಾಪಿಸಿ ಸದನದ ಮತ್ತು ಶಾಸಕರ ಸಮಯ ವ್ಯರ್ಥ ಮಾಡಿರುವ ಕಾಂಗ್ರೆಸ್, ರಾಜಕೀಯ ದುರುದ್ದೇಶದಿಂದ 6 ಮಂದಿ ಸಚಿವರ ತೇಜೋವಧೆ ಮಾಡಲು ಯತ್ನಿಸುತ್ತಿದೆ " ಎಂದು ಹೇಳಿದ್ದಾರೆ.