ನವದೆಹಲಿ, ಮಾ.25 (DaijiworldNews/MB) : ಭಾರತದ 18 ರಾಜ್ಯಗಳಲ್ಲಿ ಹೊಸ ಕೊರೊನಾ ತಳಿ ಪತ್ತೆಯಾಗಿದ್ದು ಇದು ದ್ವಿಗುಣ ರೂಪಾಂತರ ಹೊಂದಿರುವ ತಳಿಗಳಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಈ ಬಗ್ಗೆ ಸಚಿವಾಲಯವು ಪತ್ರಿಕಾ ಪ್ರಕಟಣೆ ಹೊರಡಿಸಿದೆ. ಇನ್ನು ಭಾರತದ 18 ರಾಜ್ಯಗಳಲ್ಲಿ ಕೊರೊನಾ ಹೊಸ ತಳಿ ಪತ್ತೆಯಾದರೂ, ಇದರಿಂದಲೇ ಕೊರೊನಾ ಸೋಂಕು ಪ್ರಕರಣಗಳು ಅಧಿಕವಾಗುತ್ತಿದೆ ಎಂಬುವುದು ಇನ್ನೂ ದೃಢಪಟ್ಟಿಲ್ಲ ಎಂದೂ ಹೇಳಿದೆ.
ಜಿನೋಮ್ ಸೀಕ್ವೆನ್ಸಿಂಗ್ ಮತ್ತು ಎಪಿಡೆಮಿಯೋಲಾಜಿಕಲ್ ಅಧ್ಯಯನಗಳು ನಡೆಸಲಾಗುತ್ತಿದೆ ಎಂದು ಕೂಡಾ ತಿಳಿಸಿದೆ.
ಭಾರತದಲ್ಲಿ ಕಳೆದ ಒಂದು ದಿನದಲ್ಲಿ 47,262 ಹೊಸ ಕೊರೊನಾ ಪ್ರಕರಣಗಳು ದೃಢಪಟ್ಟಿದೆ. ಇಳಿಕೆ ಕಂಡಿದ್ದ ಕೊರೊನಾ ಸೋಂಕು ಪ್ರಕರಣಗಳು ಈಗ ದೇಶದಲ್ಲಿ ಮತ್ತೆ ಏರಿಕೆ ಕಂಡಿದೆ.