ನವದೆಹಲಿ, ಮಾ.27 (DaijiworldNews/PY): ಅಸ್ಸಾಂ ಹಾಗೂ ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದ ವಿಧಾನಸಭಾ ಚುನಾವಣೆ ಪ್ರಕ್ರಿಯೆ ಶನಿವಾರ ಪ್ರಾರಂಭವಾಗಿದ್ದು, ಪ್ರಜಾಪ್ರಭುತ್ವವನ್ನು ಬಲಪಡಿಸಲು ಹಾಗೂ ದೇಶವನ್ನು ವಿಭಜಿಸುವ ಶಕ್ತಿಗಳ ವಿರುದ್ದ ಮತ ಚಲಾಯಿಸಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮನವಿ ಮಾಡಿದ್ದಾರೆ.
ಈ ಬಗ್ಗೆ ಶನಿವಾರ ಟ್ವೀಟ್ ಮಾಡಿರುವ ಅವರು, "ಪ್ರಜಾಪ್ರಭುತ್ವವನ್ನು ಬಲಪಡಿಸಲು ವಿಭಜಕ ಶಕ್ತಿಗಳ ವಿರುದ್ದ ಮತ ಚಲಾಯಿಸಿ" ಎಂದು ವಿನಂತಿಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಎಡರಂಗ ಹಾಗೂ ಭಾರತೀಯ ಸೆಕ್ಯೂಲರ್ ಫ್ರಂಟ್ ಮೈತ್ರಿಕೂಟದಲ್ಲಿ ಕಾಂಗ್ರೆಸ್ ಪಕ್ಷ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದೆ.
ಪಶ್ಚಿಮ ಬಂಗಾಳದಲ್ಲಿ ಒಟ್ಟು ಎಂಡು ಹಂತಗಳಲ್ಲಿ ಮತದಾನ ನಡೆಯಲಿದೆ. ಮತದಾನ ಪ್ರಕ್ರಿಯೆ ಎಪ್ರಿಲ್ 29ರಂದು ಕೊನೆಗೊಳ್ಳಲಿದ್ದು, ಮೇ 2ರಂದು ಮತ ಎಣಿಕೆ ನಡೆಯಲಿದೆ.
ಮತ್ತೊಂದೆಡೆ ಅಸ್ಸಾಂನಲ್ಲಿ ಮೂರು ಹಂತಗಳ ಚುನಾವಣೆ ನಡೆಯುತ್ತಿದೆ.