ನವದೆಹಲಿ, ಮಾ.27 (DaijiworldNews/PY): "ಎದೆಯಲ್ಲಿ ಸಮಸ್ಯೆ ಕಾಣಿಸಿಕೊಂಡ ಹಿನ್ನೆಮೆ ಮಾರ್ಚ್ 26ರ ಶುಕ್ರವಾರ ದೆಹಲಿ ಸೇನಾ ಆಸ್ಪತ್ರೆಗೆ ದಾಖಲಾಗಿದ್ದ ರಾಷ್ಟ್ರಪತಿ ರಾಮನಾಥ್ ಅವರ ಆರೋಗ್ಯ ಸ್ಥಿರವಾಗಿದೆ" ಎಂದು ಸೇನೆಯ ಸಂಶೋಧನೆ ಮತ್ತು ರೆಫರಲ್ ಆಸ್ಪತ್ರೆ ತಿಳಿಸಿದೆ.
ಈ ಬಗ್ಗೆ ಶನಿವಾರ ಮಾಹಿತಿ ನೀಡಿರುವ ಸೇನಾ ಆಸ್ಪತ್ರೆಯ ವೈದ್ಯರು, "ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರನ್ನು ತೀವ್ರ ನಿಗಾದಲ್ಲಿರಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ" ಎಂದು ತಿಳಿಸಿದ್ದಾರೆ.
ಹೆಚ್ಚಿನ ಚಿಕಿತ್ಸೆಗಾಗಿ ರಾಷ್ಟ್ರಪತಿ ಅವರನ್ನು ಏಮ್ಸ್ಗೆ ದಾಖಲಿಸುವ ಬಗ್ಗೆ ಕೂಡಾ ವೈದ್ಯರು ಮಾಹಿತಿ ನೀಡಿದ್ದಾರೆ.