ಬೆಂಗಳೂರು, ಮಾ.27 (DaijiworldNews/HR): "ಡಿ.ಕೆ ಶಿವಕುಮಾರ್ ಅವರಿಗೆ ಸ್ವಲ್ಪವಾದರೂ ನೈತಿಕತೆ ಇದ್ದರೆ ದಯವಿಟ್ಟು ರಾಜೀನಾಮೆ ಕೊಟ್ಟುಬಿಡಿ" ಎಂದು ಬಿಜೆಪಿ ರಾಜ್ಯ ಘಟಕ ಹೇಳಿದೆ.
ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ ರಾಜ್ಯ ಘಟಕ, "ನಮ್ಮ ಮಗಳನ್ನು ಡಿಕೆ ಶಿವಕುಮಾರ್ ಒತ್ತೆಯಾಳಾಗಿಟ್ಟುಕೊಂಡು ರಾಜಕಾರಣ ಮಾಡುತ್ತಿದ್ದಾರೆ ಎಂದು ಸಿ.ಡಿ ಯುವತಿಯ ಪೋಷಕರು ಗಂಭೀರ ಆರೋಪ ಮಾಡುತ್ತಿದ್ದು, ಒತ್ತೆಯಲ್ಲಿಟ್ಟುಕೊಂಡಿರುವ ಸಂತ್ರಸ್ತೆಯನ್ನು ಬಿಟ್ಟುಬಿಡಿ" ಎಂದಿದೆ,
"ಮಹಾನಾಯಕ ಡಿ.ಕೆ ಶಿವಕುಮಾರ್ ಅವರೇ, ನಿಮಗೆ ಸ್ವಲ್ಪವಾದರೂ ನೈತಿಕತೆ ಇದ್ದರೆ ದಯವಿಟ್ಟು ರಾಜೀನಾಮೆ ಕೊಟ್ಟುಬಿಡಿ. ಎಲ್ಲವನ್ನೂ ತಾನೇ ಮುಂದೆ ನಿಂತು ಮಾಡಿಸುತ್ತಾರೆ, ಸದನದಲ್ಲಿ ಬೊಬ್ಬಿರಿಯುತ್ತಾರೆ, ಸುಭಗನಂತೆ ನಟಿಸುತ್ತಾರೆ" ಎಂದು ಹೇಳಿದೆ.
ಇನ್ನು "ರಾಜೀನಾಮೆ ನೀಡಲು ಇನ್ನೆಷ್ಟು ಕಾಲ ಬೇಕು ಮಾನ್ಯ ಶಿವಕುಮಾರ್ ಅವರೇ ನೇರವಾಗಿ ಆರೋಪ ಮಾಡಿದ್ದಾರೆ. ರಾಜಕೀಯ ಲಾಭಕ್ಕಾಗಿ ಸಂತ್ರಸ್ಥೆಯನ್ನು ಬಳಸಿಕೊಂಡ ಆರೋಪ ನಿಮ್ಮ ಮೇಲೆ ಇದೆ. ಇಷ್ಟೆಲ್ಲಾ ಮಾಡಿಯೂ ಸದನದಲ್ಲಿ ಹೇಗೆ ಮುಖ ಇಟ್ಟುಕೊಂಡು ಸಿಡಿ ವಿಚಾರವಾಗಿ ಮಾತನಾಡಿದ್ದೀರಿ? ತಕ್ಷಣವೇ ರಾಜೀನಾಮೆ ನೀಡಿ" ಎಂದು ಟ್ವೀಟ್ ಮಾಡಿದೆ.