ಬೆಂಗಳೂರು,ಮಾ.27 (DaijiworldNews/HR): ಮಾಜಿ ಸಚಿವ ರಮೇಶ್ ಜಾರಕಿಹೊಳಿಯ ದೃಶ್ಯವಷ್ಟೇ ಅಶ್ಲೀಲವಲ್ಲ, ಅವರ ಮಾತು ಕೂಡ ಅಶ್ಲೀಲ ಎಂದು ಕರ್ನಾಟಕ ಕಾಂಗ್ರೆಸ್ ಹೇಳಿದೆ.
ಸಿ.ಡಿ ಯುವತಿಯ ಪೋಷಕರು, ಸುದ್ದಿಗೋಷ್ಠಿ ನಡೆಸಿದ ಬೆನ್ನಲ್ಲೇ, ರಮೇಶ್ ಜಾರಕಿಹೊಳಿ ನೀಡಿದ ಹೇಳಿಕೆ ಕುರಿತಂತೆ ಪ್ರತಿಕ್ರಿಯಿಸಿ ಟ್ವೀಟ್ ಮಾಡಿರುವ ಕಾಂಗ್ರೆಸ್, "ರಮೇಶ್ ಜಾರಕಿಹೊಳಿ ಬಿಜೆಪಿ ಸಂಸ್ಕೃತಿ ಬಿಂಬಿಸುವ ದೊಡ್ಡ ದೊಡ್ಡ ಮಾತುಗಳನ್ನಾಡಿದ್ದಾರೆ, ಇದು ಹೊಲಸುತನದ ಪರಮಾವಧಿ. ಅಂತಹ ಪದಗಳು ಬಿಜೆಪಿಗರ ಬಾಯಲ್ಲಿ ಮಾತ್ರ ಬರಲು ಸಾಧ್ಯ" ಎಂದಿದೆ.
ಇನ್ನು "ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರೇ, ಕೇಸ್ ದಾಖಲಾಗಿದ್ದರೂ ಬಂಧಿಸದೇ ಇಂತ ಕೀಳು ನಾಟಕ ಆಡಲು ಬಿಟ್ಟಿದ್ದೀರಾ? ಎಂದು ಪ್ರಶ್ನಿಸಿದೆ.