ಶ್ರೀನಗರ, ಮಾ.28 (DaijiworldNews/HR): ಗುಂಡಿನ ದಾಳಿಯಲ್ಲಿ ಇಬ್ಬರು ಉಗ್ರರನ್ನು ಹತ್ಯೆಗೈಯುವಲ್ಲಿ ಭದ್ರತಾ ಪಡೆ ಯಶಸ್ವಿಯಾಗಿದ್ದು, ಘಟನೆಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದು, ಮತ್ತೊರ್ವ ಯೋಧ ಗಾಯಗೊಂಡ ಘಟನೆ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ನಡೆದಿದೆ.
ಸಾಂಧರ್ಭಿಕ ಚಿತ್ರ
ಉಗ್ರರು ದಕ್ಷಿಣ ಕಾಶ್ಮೀರದ ಶೋಪಿಯಾನ್ನ ವಾಂಗಮ್ ಪ್ರದೇಶದಲ್ಲಿ ಅಡಗಿ ಕುಳಿತಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಭದ್ರತಾ ಪಡೆಗಳು ಶನಿವಾರ ಸಂಜೆಯ ವೇಳೆಗೆ ಶೋಧ ಕಾರ್ಯವನ್ನು ಪ್ರಾರಂಭಿಸಿದ್ದು, ಈ ವೇಳೆ ಉಗ್ರರು ಗುಂಡು ಹಾರಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು ತಕ್ಷಣವೇ ಭದ್ರತಾ ಪಡೆಯು ತಿರುಗೇಟು ನೀಡಿದ್ದು, ಬಳಿಕ ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ಉಗ್ರರನ್ನು ಹತ್ಯೆಗೈಯಲಾಗಿದೆ.
ಕಾರ್ಯಾಚರಣೆಯಲ್ಲಿ ಗಾಯಗೊಂಡ ಸೈನಿಕನನ್ನು ಸೇನೆಯ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಚಿಕಿತ್ಸೆ ಒದಗಿಸಲಾಗುತ್ತಿದೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಲಾಗಿದೆ.