ಮುಂಬೈ, ಮಾ.28 (DaijiworldNews/HR): ಮಾಜಿ ಆಟಗಾರ ಸಚಿನ್ ತೆಂಡೂಲ್ಕರ್ ಅವರಿಗೆ ಕೊರೊನಾ ಸೋಂಕು ದೃಢವಾದ ಬೆನ್ನಲ್ಲೇ ಇದೀಗ ಯೂಸುಫ್ ಪಠಾಣ್ಗೂ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಕುರಿತು ಟ್ವೀಟ್ ಮಾಡಿ ಮಾಹಿತಿ ನೀಡಿರುವ ಯೂಸುಫ್, "ನನಗೆ ಕೊರೊನಾ ಪಾಸಿಟಿವ್ ಆಗಿರುವುದು ದೃಢವಾಗಿದ್ದು, ಕೆಲವು ಸಣ್ಣ ಪುಟ್ಟ ಲಕ್ಷಣಗಳಿವೆ. ನಾನು ಸದ್ಯ ಮನೆಯಲ್ಲಿಯೇ ಕ್ವಾರಂಟೈನ್ ನಲ್ಲಿದ್ದೇನೆ" ಎಂದು ತಿಳಿಸಿದ್ದಾರೆ.
ಇನ್ನು ಮಾರ್ಚ್ 21ರಂದು ರೋಡ್ ಸೇಫ್ಟಿ ವರ್ಲ್ಡ್ ಸೀರೀಸ್ ರಾಯ್ ಪುರದಲ್ಲಿ ಫೈನಲ್ ನಡೆದಿದ್ದು, ಇಂಡಿಯಾ ಲೆಜೆಂಡ್ಸ್ ಮತ್ತು ಶ್ರೀಲಂಕಾ ಲೆಜೆಂಡ್ಸ್ ಆಡಿದ್ದವು. ಈ ಫೈನಲ್ ಪಂದ್ಯದಲ್ಲಿ ಸಚಿನ್ ತೆಂಡೂಲ್ಕರ್ ಮತ್ತು ಯೂಸುಫ್ ಪಠಾಣ್ ಆಡಿದ್ದರು.