ಹಾಸನ, ಮಾ.28 (DaijiworldNews/HR): ಹಾಸನದಲ್ಲಿ ಬಾಲಕಿಯೊಬ್ಬಳು ತನ್ನ ಪೋಷಕರೊಂದಿಗೆ ಮಲಗಿದ್ದ ವೇಳೆ ಹೊತ್ತೊಯ್ದು ಕಾಮುಕನೊಬ್ಬ, ಅತ್ಯಾಚಾರ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ.
ಸಾಂಧರ್ಭಿಕ ಚಿತ್ರ
ಬಾಲಕಿಯು ಅಲೆಮಾರಿ ಕುಟುಂಬದಳಾಗಿದ್ದು ಹಾಸನ ನಗರ ಹೊಸ ಬಸ್ ನಿಲ್ದಾಣದ ಬಳಿ ಬೀಡು ಬಿಟ್ಟಿದ್ದು, ರಾತ್ರಿ ಬಾಲಕಿ ತನ್ನ ತಂದೆ-ತಾಯಿ ಜೊತೆ ನಿದ್ರೆಯಲ್ಲಿದ್ದು ಈ ವೇಳೆ ಕಾಮುಕನೊಬ್ಬ ಬಾಲಕಿಯನ್ನು ಹೊತ್ತೊಯ್ದು ಅತ್ಯಾಚಾರ ನಡೆಸಿದ್ದಾನೆ ಎನ್ನಲಾಗಿದೆ.
ಇನ್ನು ಈ ದೃಶ್ಯ ಬಸ್ ನಿಲ್ದಾಣದ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸದ್ಯ ಬಾಲಕಿಗೆ ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಬಗ್ಗೆ ಹಾಸನ ಬಡಾವಣೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.