ಉಧಂಪುರ, ಮಾ.28 (DaijiworldNews/PY): ತನ್ನ ಸಹೋದ್ಯೋಗಿಯೋರ್ವರನ್ನು ಪೊಲೀಸ್ ಅಧಿಕಾರಿಯೊಬ್ಬರು ಗುಂಡಿಕ್ಕಿ ಹತ್ಯೆಗೈದ ಘಟನೆ ಜಮ್ಮು-ಕಾಶ್ಮೀರದ ಉಧಂಪುರ್ ಜಿಲ್ಲೆಯಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
"ಕಾನ್ಸ್ಟೆಬಲ್ ಕಾಕಾ ರಾಮ್ ಹಾಗೂ ವಿಶೇಷ ಪೊಲೀಸ್ ಅಧಿಕಾರಿ ಮನೋಹರ್ಲಾಲ್ ಅವರನ್ನು ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯ ಜಖಾನಿ ಚಕ್ ಪೋಸ್ಟ್ನಲ್ಲಿ ನಿಯೋಜನೆ ಮಾಡಲಾಗಿತ್ತು. ಯಾವುದೋ ವಿಚಾರಕ್ಕೆ ಇಬ್ಬರ ಮಧ್ಯೆ ಜಗಳ ನಡೆದಿದೆ. ಈ ಸಂದರ್ಭ ಕೋಪಗೊಂಡ ಮನೋಹರ್ ಲಾಲ್ ಸರ್ವಿಸ್ ರೈಫಲ್ನಿಂದ ರಾಮ್ ಮೇಲೆ ಗುಂಡು ಹಾರಿಸಿದ್ದಾರೆ" ಎಂದು ಅಧಿಕಾರಿಗಳು ಹೇಳಿದ್ದಾರೆ.
"ಬಳಿಕ ರಾಮ್ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ, ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಸದ್ಯ ಮನೋಹರ್ ಲಾಲ್ ಅವರನ್ನು ಬಂಧಿಸಲಾಗಿದೆ" ಎಂದಿದ್ದಾರೆ.