ಲಕ್ನೋ, ಮಾ.28 (DaijiworldNews/PY): ಅತ್ಯಾಚಾರ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗೆ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿದೆ.
ಸಾಂದರ್ಭಿಕ ಚಿತ್ರ
ಉತ್ತರಪ್ರದೇಶದ ಅಜಾಮ್ಗಡ ಜಿಲ್ಲೆಯ ಮುಬಾರಕ್ ಪುರದಲ್ಲಿ ಈ ಘಟನೆ ನಡೆದಿದ್ದು, ಅಪರಾಧಿಯನ್ನು ನಜಿರುದ್ದಿನ್ ಅಲಿಯಾಸ್ ಪವ್ವಾ ಎಂದು ಗುರುತಿಸಲಾಗಿದೆ.
ಈ ಪ್ರಕರಣ 2019ರಲ್ಲಿ ನಡೆದಿದ್ದು, ನಜಿರುದ್ದಿನ್, ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿ ಮಹಿಳೆ ಹಾಗೂ ಆಕೆಯ ಮಗಳ ಮೇಲೆ ಅತ್ಯಾಚಾರವೆಸಗಿದ್ದ. ಅಲ್ಲದೇ ಮಹಿಳೆಯ ಪತಿ ಹಾಗೂ ಆಕೆಯ ನಾಲ್ಕು ತಿಂಗಳ ಮಗುವನ್ನು ಹತ್ಯೆ ಮಾಡಿದ್ದ.
ಈ ಪ್ರಕರಣ ವಿಚಾರಣೆ ನಡೆಸಿದ ಪೋಕ್ಸೋ ನ್ಯಾಯಾಲಯ, ಅಪರಾಧಿಗೆ ಮರಣದಂಡನೆ ಶಿಕ್ಷೆ ವಿಧಿಸಿದೆ. ಅಲ್ಲದೇ, 9 ಲಕ್ಷ ರೂ.ಗಳ ದಂಡವನ್ನು ವಿಧಿಸಿದೆ.
ಇನ್ನು ಈ ಪ್ರಕರಣವನ್ನು ಬೇಧಿಸಿದ ಉತ್ತರ ಪ್ರದೇಶ ಸರ್ಕಾರ ಪೊಲೀಸರಿಗೆ ಹಾಗೂ ವಾದ ಮಂಡಿಸಿದ ವಕೀಲರ ತಂಡಕ್ಕೆ 1 ಲಕ್ಷ ರೂ. ಬಹುಮಾನ ಘೋಷಿಸಿದೆ.
"ಪ್ರಕರಣವನ್ನು ಬೇಧಿಸಿದ ಅಧಿಕಾರಿಗಳಿಗೆ ಉತ್ತರಪ್ರದೇಶ ಸರ್ಕಾರ 1 ಲಕ್ಷ ರೂ. ಬಹುಮಾನ ಘೋಷಿಸಿದೆ" ಎಂದು ಉತ್ತರ ಪ್ರದೇಶ ಸರ್ಕಾರದ ಹೆಚ್ಚುವರಿ ಪ್ರಧಾನ ಕಾರ್ಯದರ್ಶಿ ಅವಿನಾಶ್ ಕುಮಾರ್ ಸ್ವಸ್ಥಿ ತಿಳಿಸಿದ್ದಾರೆ.