ಬೆಂಗಳೂರು, ಮಾ.28 (DaijiworldNews/MB) : ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರದ್ದು ಎಂದು ಹೇಳಲಾದ ಅಶ್ಲೀಲ ಸಿ.ಡಿ.ಯಲ್ಲಿನ ಯುವತಿ ಪ್ರಕರಣದ ಕುರಿತು ಹೇಳಿಕೆ ನೀಡಲು ಮಾ.29ರಂದು ನ್ಯಾಯಾಲಯದಲ್ಲಿ ಹಾಜರಾಗುವ ಸಾಧ್ಯತೆಯಿದೆ ಎಂದು ವಕೀಲ ಕೆ.ಎನ್.ಜಗದೀಶ್ ತಿಳಿಸಿದ್ದಾರೆ.

ಈ ಬಗ್ಗೆ ವಿಡಿಯೋ ಮೂಲಕ ತಿಳಿಸಿರುವ ವಕೀಲರು, ಸಿ.ಡಿ. ಪ್ರಕರಣಕ್ಕೆ ಸಂಬಂಧಿಸಿ ಅತ್ಯಾಚಾರ ಪ್ರಕರಣ ಮತ್ತು ಸುಲಿಗೆ ಪ್ರಕರಣ ದಾಖಲಾಗಿವೆ. ಎರಡೂ ಪ್ರಕರಣಗಳನ್ನು ವಿಶೇಷ ತನಿಖಾ ತಂಡ(ಎಸ್.ಐ.ಟಿ.) ತನಿಖೆ ನಡೆಸುತ್ತಿದೆ. ಇವೆರಡೂ ಗಂಭೀರವಾದ ದೂರು. ಪೊಲೀಸರು ನ್ಯಾಯಯುತವಾಗಿ ತನಿಖೆ ನಡೆಸುವ ಬಗ್ಗೆ ಸಂಶಯಗಳಿವೆ. ಕೋರ್ಟ್ನಲ್ಲಿ ಇನ್-ಕ್ಯಾಮೆರಾ ಪ್ರಕ್ರಿಯೆ ನಡೆಯಲಿದೆ. ಆರೋಪಿ ಮತ್ತು ಸಂತ್ರಸ್ತೆ ಆರೋಗ್ಯ ಪರೀಕ್ಷೆಗೆ ಒಳಗಾಗಬೇಕಾಗುತ್ತದೆ ಎಂದು ಹೇಳಿದರು.
ಯುವತಿ ನೀಡಿದ ದೂರಿ ಪ್ರತಿಯನ್ನು ಆಕೆಯ ಪರ ವಕೀಲರಾಗಿರುವ ಕೆ.ಎನ್.ಜಗದೀಶ್ ಶುಕ್ರವಾರ ಪೊಲೀಸ್ ಆಯುಕ್ತರಿಗೆ ತಲುಪಿಸಿ, ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದರು. ಈ ದೂರಿನಂತೆ ರಮೇಶ್ ಜಾರಕಿಹೊಳಿ ವಿರುದ್ಧ ಎಫ್ಐಆರ್ ದಾಖಲಾಗಿದೆ.