ಬೆಂಗಳೂರು, ಮಾ 29 (DaijiworldNews/MS):ರಮೇಶ್ ಜಾರಕಿಹೊಳಿ ಅವರ ಸಿಡಿ ಪ್ರಕರಣದ ಯುವತಿ ಹೈಕೋರ್ಟ್ ಮುಖ್ಯನ್ಯಾಯಮೂರ್ತಿಗೆ ಪತ್ರ ಬರೆದಿದ್ದಾಳೆ ಎನ್ನಲಾದ ಪತ್ರ ವೈರಲ್ ಆಗಿದೆ.
ಭಾನುವಾರ ಇಮೇಲ್ ಮೂಲಕ ಮುಖ್ಯ ನ್ಯಾಯಮೂರ್ತಿಗೆ ಪತ್ರ ರವಾನಿಸಲಾಗಿದೆ ಎನ್ನಲಾದ ಯುವತಿ ಪತ್ರದಲ್ಲಿ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಓರ್ವ ಪ್ರಭಾವಿ ವ್ಯಕ್ತಿಯಾಗಿದ್ದು, ಸಾರ್ವಜನಿಕವಾಗಿ ಜೀವ ಬೆದರಿಕೆ ಹಾಕಿದ್ದಾರೆ.
ನನ್ನ ತಂದೆ ತಾಯಿಗಳಿಗೆ ಬಲವಂತವಾಗಿ ಹೇಳಿಕೆ ಕೊಡಿಸಲಾಗಿದ್ದು, ಪ್ರಕರಣದಲ್ಲಿ ನನಗೆ ಮತ್ತು ನನ್ನ ಪೋಷಕರಿಗೆ ರಕ್ಷಣೆ ನೀಡಬೇಕು. ನಿಮ್ಮ ಮೇಲುಸ್ತುವಾರಿಯಲ್ಲಿ ಎಸ್ಐಟಿ ತನಿಖೆ ನಡೆಯಬೇಕು ಎಂದು ಮನವಿ ಮಾಡಿಕೊಂಡಿದ್ದಾಳೆ.
ಇದರ ನಡುವೆ ಸಿಡಿ ಪ್ರಕರಣದ ಸಂತ್ರಸ್ತೆ ಎನ್ನಲಾದ ಯುವತಿ ಸೋಮವಾರ ವಿಚಾರಣೆ ಹಾಜರೋಗವ ಬಹುತೇಕ ಸಾಧ್ಯತೆಗಳಿವೆ. ಮ್ಯಾಜಿಸ್ಟ್ರೇಟ್ ಮುಂದೆ ಸಮಯ ನೋಡಿಕೊಂಡು ನ್ಯಾಯಾಲಯಕ್ಕೆ ಹಾಜರು ಪಡಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಇದಕ್ಕಾಗಿ 20ಕ್ಕೂ ಹೆಚ್ಚು ಹಿರಿಯ ವಕೀಲರ ಟೀಂ ಸಿದ್ಧತೆ ಮಾಡಿಕೊಂಡಿದೆ ಎಂಬ ಮಾತುಗಳು ಕೇಳಿಬರುತ್ತಿವೆ.