ಬೆಂಗಳೂರು, ಮಾ 29 (DaijiworldNews/MS): ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿ ಪ್ರಕರಣದ ಯುವತಿಯ ಪೋಷಕರು , ರಾಜಕೀಯ ಲಾಭಕ್ಕಾಗಿ ತಮ್ಮ ಮಗಳನ್ನು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಬಳಸಿಕೊಳ್ಳುತ್ತಿದ್ದಾರೆ ಎಂಬ ಹೇಳಿಕೆಯ ಮೇಲೆ, ಪ್ರತಿಕ್ರಿಯಿಸಿರುವ "ಯುವತಿಯ ಪೋಷಕರ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕುವುದಿಲ್ಲ" ಎಂದಿದ್ದಾರೆ.
ಭಾನುವಾರ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು , " ನಮ್ಮ ಗಮನ ಈಗ ರಾಜ್ಯದಲ್ಲಿ ನಡೆಯಲಿರುವ ಉಪ ಚುನಾವಣೆ ಮೇಲೆ ಮಾತ್ರ ಕೇಂದ್ರೀಕೃತವಾಗಿದೆ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಏನು ಬೇಕಾದರೂ ಮಾಡಲಿ, ಕಾನೂನು ತನ್ನದೇ ಆದ ಕ್ರಮ ಕೈಗೊಳ್ಳುತ್ತದೆ ಎಂದು ಹೇಳಿದರು.
ಸರ್ಕಾರ ಏನೇ ಮಾಡಿದರೂ , ಪೊಲೀಸ್ ಇಲಾಖೆ ನಿಸ್ಪಕ್ಷಪಾತವಾಗಿ ತನಿಖೆ ನಡೆಸಬೇಕೆಂದು ನಾನು ಹೇಳುತ್ತೇನೆ. ಇನ್ನು ಸಂತ್ರಸ್ತೆ ಯುವತಿ ಎಸ್ ಐಟಿ ಮುಂದೆ ಹಾಜರಾಗಿ ಯುವತಿ ಹೇಳಿಕೆ ನೀಡುವ ಸಾಧ್ಯತೆಯಿದ್ದು, ಈ ಬಗ್ಗೆ ತಾವು ಏನೂ ಪ್ರತಿಕ್ರಿಯಿಸುವುದಿಲ್ಲ ಯುವತಿಯ ಪೋಷಕರ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕುವುದಿಲ್ಲ ಎಂದಿದ್ದಾರೆ.
ಶನಿವಾರ ತಾನೆ ಯುವತಿ ಪೋಷಕರು ಮಾಧ್ಯಮಗಳ ಮುಂದೆ ಮಾತನಾಡಿ ಸಿಡಿ ಪ್ರಕರಣದಲ್ಲಿ ಹೆಣ್ಣು ಮಗಳನ್ನು ಇಟ್ಟುಕೊಂಡು ಹೊಲಸು ರಾಜಕಾರಣ ಮಾಡುತ್ತಿದ್ದಾರೆ. ತಮ್ಮ ಕುಟುಂಬಕ್ಕೆ ಏನೇ ಸಮಸ್ಯೆ, ತೊಂದರೆಯಾದರೂ ಶಿವಕುಮಾರ್ ಅವರು ಕಾರಣರಾಗುತ್ತಾರೆ, ರಹಸ್ಯ ಸ್ಥಳದಿಂದ ತಮ್ಮ ಮಗಳನ್ನು ಹಿಂದಕ್ಕೆ ಕಳುಹಿಸುವಂತೆ ಕೇಳಿಕೊಂಡಿದ್ದರು.