ಭೋಪಾಲ್, ಮಾ.29 (DaijiworldNews/HR): ಮಧ್ಯಪ್ರದೇಶದ ಭಿಂದ್ ಜಿಲ್ಲೆಯಲ್ಲಿ ತನ್ನ ಇಬ್ಬರು ಮಕ್ಕಳು ಸೇರಿದಂತೆ ಇಡೀ ಕುಟುಂಬಕ್ಕೆ ವಿಷವುಣಿಸಿದ ಮಹಿಳೆಯೊಬ್ಬರು ಪ್ರಿಯಕರನೊಂದಿಗೆ ಓಡಿಹೋಗಿರುವ ಘಟನೆ ನಡೆದಿದೆ.
ಸಾಂದರ್ಭಿಕ ಚಿತ್ರ
ಈ ಕುರಿತು ಪೊಲೀಸರು ಮಾಹಿತಿ ನೀಡಿದ್ದು, ಒಂದೇ ಕುಟುಂಬದ 12ಕ್ಕೂ ಹೆಚ್ಚು ಮಂದಿಯ ಸ್ಥಿತಿ ಗಂಭೀರವಾಗಿದ್ದು, ಪತಿ, ಮೈದುನ ಮತ್ತು ತನ್ನಿಬ್ಬರು ಮಕ್ಕಳು ಸೇರಿದಂತೆ ಇಡೀ ಕುಟುಂಬಕ್ಕೆ ಮಹಿಳೆ ವಿಷವಿಕ್ಕಿದ್ದಾಳೆ. ಗಂಭೀರ ಸ್ಥಿತಿಯಲ್ಲಿರುವವರನ್ನು ಗ್ವಾಲಿಯರ್ನ ಜಯ ಆರೋಗ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.
ಮಹಿಳೆಯ ಪತಿ ಮೃತಪಟ್ಟ್ ಬಳಿಕ ಪತಿ ಕಿರಿಯ ಸಹೋದರ ಛೋಟು ಖಾನ್ನನ್ನು ಮಹಿಳೆಗೆ ಮರು ಮದುವೆ ಆಗಿದ್ದಳು. ಆದರೆ ಮಹಿಳೆ ಛೋಟು ಖಾನ್ ಸೋದರ ಮಾವ ಲೋಖನ್ ಖಾನ್ ಜತೆ ಅಕ್ರಮ ಸಂಬಂಧ ಹೊಂದಿದ್ದಳು ಎಂದು ತಿಳಿದುಬಂದಿದೆ.
ಇನ್ನು ಈ ವಿಚಾರ ತಿಳಿದು ಕುಟುಂಬದಲ್ಲಿ ಗಲಾಟೆಯು ನಡೆದಿದ್ದು, ಈ ಹಿನ್ನಲೆಯಲ್ಲಿ ಮಹಿಳೆ ಲೋಖನ್ ಖಾನ್ ಜತೆ ಓಡಿ ಹೋಗಿದ್ದಾಳೆ. ಅದಕ್ಕೂ ಮುನ್ನ ಆಹಾರದಲ್ಲಿ ವಿಷ ಬೆರೆಸಿಟ್ಟು ಪರಾರಿಯಾಗಿದ್ದಾಳೆ ಎನ್ನಲಾಗಿದೆ.