ಬೆಂಗಳೂರು, ಮಾ.29 (DaijiworldNews/HR): ನನ್ನ ಹಿಂದೆ ನೀವೇನಾದರೂ ಬಿದ್ದರೆ, ನಾನು ಮಹಡಿಯಿಂದ ಹಾರಿ ಆತ್ಮಹತ್ಮೆ ಮಾಡಿಕೊಳ್ಳುತ್ತೇನೆ'' ಎಂದು ಸಿಡಿ ಲೇಡಿ ಎಸ್ಐಟಿ ಅಧಿಕಾರಿಗಳಿಗೆ ಬೆದರಿಕೆ ಹಾಕಿದ್ದಾಳೆ ಎನ್ನಲಾಗಿದೆ.
ಯುವತಿ ಬೆಂಗಳೂರಿನಲ್ಲಿ ಇರುವ ಬಗ್ಗೆ ಮಾಹಿತಿ ಪಡೆದ ಎಸ್ಐಟಿ ಅಧಿಕಾರಿಗಳು ಹದ್ದಿನ ಕಣ್ಣು ಇಟ್ಟಿದ್ದು, ಇದರ ಬೆನ್ನಲ್ಲೇ ಗೂಗಲ್ ಮೂಲಕ ಎಸ್ಐಟಿ ಅಧಿಕಾರಿಗಳ ಸಂಪರ್ಕ ಸಂಖ್ಯೆ ಪಡೆದಿರುವ ಸಿಡಿ ಯುವತಿ, ನಿಮ್ಮ ಮೇಲೆ ನನಗೆ ಯಾವುದೇ ನಂಬಿಕೆ ಇಲ್ಲ. ನಾನು ನ್ಯಾಯಾಲಯಕ್ಕೆ ಹಾಜರಾಗುವದನ್ನು ತಪ್ಪಿಸಿ ವಶಕ್ಕೆ ಪಡೆಯಲು ಯತ್ನಿಸಿದಲ್ಲಿ, ನಿಮ್ಮ ಹೆಸರಲ್ಲೇ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ. ನಿಮ್ಮ ಮೇಲೆ ನನಗೆ ಯಾವುದೇ ನಂಬಿಕೆ ಇಲ್ಲ. ನಾನು ನೇರವಾಗಿ ನ್ಯಾಯಾಲಯಕ್ಕೆ ಹೋಗುತ್ತೇನೆ. ಅದಕ್ಕೆ ಯಾವುದೇ ಕಾರಣಕ್ಕೆ ಅಡ್ಡಿಪಡಿಸಬೇಡಿ ಎಂದು ಎಚ್ಚರಿಕೆ ನೀಡಿದ್ದಾಳೆ.
ಇನ್ನು ಭಾನುವಾರ ಸಂಜೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಇಮೇಲ್ ಮಾಡಿದ್ದ ಯುವತಿ ನನಗೆ ಎಸ್ಐಟಿ ಅಧಿಕಾರಿಗಳ ಮೇಲೆ ನಂಬಿಕೆ ಇಲ್ಲ. ರಮೇಶ್ ಜಾರಕಿಹೊಳಿ ಪ್ರಭಾವಿ ವ್ಯಕ್ತಿ. ನನ್ನ ತಂದೆ ತಾಯಿಗೆ ಹೆದರಿಸಿ ತಪ್ಪು ಹೇಳಿಕೆ ಕೊಡಿಸಿದ್ದಾರೆ. ನನಗೆ ಜೀವ ಬೆದರಿಕೆ ಇದೆ. ಹೀಗಾಗಿ ಈ ಪ್ರಕರಣವನ್ನು ಮಾನ್ಯ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆ ನಡೆಯಬೇಕು. ಇದಕ್ಕೆ ಅವಕಾಶ ಕೊಡಬೇಕು ಎಂದು ಸಂತ್ರಸ್ತ ಯುವತಿ ಮನವಿ ಮಾಡಿಕೊಂಡಿದ್ದಳು.