ಬೆಂಗಳೂರು, ಮಾ. 29 (DaijiworldNews/SM): ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಕ್ರಮ ಕಗೊಳ್ಳಲಾಗುವುದೇ ಹೊರತುಪಡಿಸಿ ಯಾವುದೇ ಲಾಕ್ ಡೌನ್ ಜಾರಿಗೊಳಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪುನರುಚ್ಚರಿಸಿದ್ದಾರೆ.
ಕೊರೋನಾ ರೂಪಾಂತರಿ ಹೆಚ್ಚಳ ಹಿನ್ನಲೆಯಲ್ಲಿ ಸಿಎಂ ಯಡಿಯೂರಪ್ಪ ಅವರು ಇಂದು ಸಂಜೆ ಗೃಹ ಕಚೇರಿ ಕೃಷ್ಣಾದಲ್ಲಿ ಗೃಹ, ಆರೋಗ್ಯ, ಶಿಕ್ಷಣ ಸಚಿವರು ಹಾಗೂ ಇಲಾಖಾಧಿಕಾರಿಗಳ ಜೊತೆ ಸಭೆ ನಡೆಸಿದರು. ಬಳಿಕ ಸುದ್ದಿಗೋಷ್ಠಿ ನಡೆಸಿದ ಅವರು, ರಾಜ್ಯದಲ್ಲಿ ಯಾವುದೇ ಲಾಕ್ ಡೌನ್ ಜಾರಿಗೊಳಿಸುವುದಿಲ್ಲ. ನೈಟ್ ಕರ್ಫ್ಯೂ ಸಹ ಜಾರಿಗೆ ತರುವ ಉದ್ದೇಶ ಹೊಂದಿಲ್ಲ. ಆದರೆ ನಾಳೆಯಿಂದ 15 ದಿನ ಧಾರ್ಮಿಕ ಕಾರ್ಯಕ್ರಮ, ಜಾತ್ರೆ, ಪ್ರತಿಭಟನೆ, ಸತ್ಯಾಗ್ರಹಗಳಿಗೆ ಅವಕಾಶ ಇಲ್ಲ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.