ಬೆಂಗಳೂರು, ಮಾ.30 (DaijiworldNews/HR): ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರದ್ದು ಎನ್ನಲಾದ ಸಿ.ಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿ.ಡಿ ಯುವತಿ ನೀಡಿದ್ದ ದೂರನ್ನು ಎಸ್ಐಟಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ತಿಳಿದು ಬಂದಿದೆ.
ಸಂತ್ರಸ್ತ ಯುವತಿಯು ಸಿ.ಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಈ ದೂರನ್ನು ಇದೀಗ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಎಸ್ಐಟಿಗೆ ವರ್ಗಾವಣೆ ಮಾಡಿದ್ದಾರೆ ಎನ್ನಲಾಗಿದೆ.
ಇನ್ನು ಈ ಪ್ರಕರಣದ ತನಿಖಾಧಿಕಾರಿಯಾಗಿ ಎಸಿಪಿ ಕವಿತಾ ಅವರನ್ನು ನೇಮಕ ಮಾಡಲಾಗಿದೆ ಎಂದು ತಿಳಿದು ಬಂದಿದೆ.