ಕಲಬುರಗಿ, ಮಾ.30 (DaijiworldNews/MB) : ''ರಾಜ್ಯದಲ್ಲಿ ಎರಡನೇ ಕೊರೊನಾ ಅಲೆ ಈಗಾಗಲೇ ಆರಂಭವಾಗಿದೆ. ಇದನ್ನು ನಿಯಂತ್ರಿಸಬೇಕಾದರೆ ಸರ್ಕಾರ ಕಠಿಣ ಕ್ರಮ ಪಾಲನೆ ಮಾಡುವುದು ಅತ್ಯಗತ್ಯವಾಗಿದೆ'' ಎಂದು ವಿಧಾನಸಭೆ ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ''ಕೊರೊನಾ ನಿಯಂತ್ರಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು. ಜನರ ಆರೋಗ್ಯವನ್ನು ಗಮನದಲ್ಲಿರಿಸಿ ಸರ್ಕಾರ ಪ್ರತಿಭಟನೆ, ಮೆರವಣಿಗೆ ಹಾಗೂ ಸಭೆಗಳಿಗೆ ನಿರ್ಬಂಧ ಹೇರಬೇಕು'' ಎಂದು ಒತ್ತಾಯಿಸಿದ್ದಾರೆ.
''ಇನ್ನು ಕೊರೊನಾದ ಈ ಸಂದರ್ಭದಲ್ಲಿ ನಮ್ಮ ಕಾಂಗ್ರೆಸ್ ಪಕ್ಷದವರು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುತ್ತೇವೆ. ನಾವು ದೊಡ್ಡ ಸಂಖ್ಯೆಯಲ್ಲಿ ಜನರನ್ನು ಸೇರಿಸಲ್ಲ. ಕೆಲವು ಮಂದಿ ಮಾತ್ರ ಮನೆಮನೆಗೆ ಹೋಗಿ ಪ್ರಚಾರ ಕಾರ್ಯ ನಡೆಸುತ್ತೇವೆ'' ಎಂದು ಹೇಳಿದರು.