ಬೆಳಗಾವಿ, ಮಾ 30 (DaijiworldNews/MS): ಸಿದ್ದರಾಮಯ್ಯ ಯಾರ ಕಾಲು ಹಿಡಿದು ಸಿಎಂ ಆಗಿದ್ದರು ಎಂದು ಜಗಜ್ಜಾಹೀರವಾಗಿದ್ದು ಅವರು ಯಾರ ಗುಲಾಮರು ಎಂಬುವುದು ದೇಶಕ್ಕೆ ತಿಳಿದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಕ್ರೋಶ ವ್ಯಂಗ್ಯವಾಡಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಅವರು , " ಸಿದ್ರಾಮಣ್ಣ ಯಾರ ಗುಲಾಮರು ಎಂಬುದು ಎಲ್ಲರಿಗೂ ತಿಳಿದಿದೆ. ಸಿದ್ರಾಮಣ್ಣ ಯಾರ ಕಾಲು ಹಿಡಿದು ಸಿಎಂ ಆಗಿದ್ದಾರೆ. ಅವರಿಗೆ 65 ವರ್ಷ. ಅವರು ಹಿರಿಯರು. ರಾಹುಲ್ ಗಾಂಧಿ ಕಿರಿಯರು. ಅವರ ಕಾಲು ಹಿಡಿದು ಸಿಎಂ ಆಗಿದ್ದಾರೆ" ಎಂದು ಹೇಳುವ ಮೂಲಕ ಬಿಜೆಪಿ ಸಂಸದರು ಕೇಂದ್ರ ಸರ್ಕಾರದ ಗುಲಾಮರು ಎಂಬ ಸಿದ್ದರಾಮಯ್ಯನವರ ಹೇಳಿಕೆಗೆ ತಿರುಗೇಟು ನೀಡಿದರು.
ಸಿ.ಡಿ ವಿಚಾರ ತನಿಖೆ ಹಂತದಲ್ಲಿದೆ. ಸಿದ್ದರಾಮಯ್ಯನವರು ಸಿಎಂ ಆಗಿದ್ದಾಗ ಸಿ.ಡಿಗಳು ಯಾವ ರೀತಿ ತನಿಖೆಯಾಗಿದೆ ಎಂಬುದು ಎಲ್ಲರಿಗೂ ಗೊತ್ತಿದೆ ಅವರಿಗೆ ಸಿಬಿಐ, ಐಟಿ, ಎಸ್ಐಟಿ ಮೇಲೆ ನಂಬಿಕೆ ಇಲ್ಲ. ಅಷ್ಟಕ್ಕೂ ಅವರಿಗೆ ಸ್ವತಃ ತಮ್ಮ ಮೇಲೆಯೇ ನಂಬಿಕೆ ಇಲ್ಲ ಎಂದು ಲೇವಡಿ ಮಾಡಿದರು.