ಅಮೃತಸರ, ಮಾ.30 (DaijiworldNews/HR): ಖ್ಯಾತ ಪಂಜಾಬಿ ಗಾಯಕ ದಿಲ್ಜಾನ್ (32) ಅವರು ಇಂದು ಅಮೃತಸರ ಜಲಂದರ್ ಹೆದ್ದಾರಿಯ ಜಂಡಿಯಾಲಾ ಗುರು ಟೌನ್ ಬಳಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಪ್ರಾಥಮಿಕ ತನಿಖೆ ಪ್ರಕಾರ ಸರಕು ಸಾಗಾಣೆಯ ವಾಹನವೊಂದಕ್ಕೆ ಮಂಗಳವಾರ ಬೆಳ್ಳಗ್ಗೆ ದಿಲ್ಜಾನ್ ಕಾರು ಹಿಂದಿನಿಂದ ಡಿಕ್ಕಿ ಹೊಡೆದಿದ್ದರಿಂದ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನು ಅಪಘಾತವಾದ ತಕ್ಷಣ ದಿಲ್ಜಾನ್ ಅವರನ್ನು ಸ್ಥಳೀಯರು ರಕ್ಷಿಸಲು ಮುಂದಾದರೂ ಕೂಡ ಅಪಘಾತದ ತೀವ್ರತೆಗೆ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ದಿಲ್ಜಾನ್ ಸಾವಿನ ಕುರಿತು ಆಘಾತ ವ್ಯಕ್ತಪಡಿಸಿ ಟ್ವೀಟ್ ಮಾಡಿರುವ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು, ಕುಟುಂಬದವರಿಗೆ ಸಾಂತ್ವಾನ ಹೇಳಿದ್ದಾರೆ.