ಬೆಳಗಾವಿ, ಮಾ.30 (DaijiworldNews/HR): ಬೆಂಗಳೂರು ನಂತರ ಗಡಿ ನಾಡು ಬೆಳಗಾವಿ ಅತ್ಯಂತ ಪ್ರಾಮುಖ್ಯತೆ ಗಳಿಸಿದ್ದು, ಇದು 2ನೇ ರಾಜಧಾನಿ ಆಗಬೇಕು ಎಂಬ ಉದ್ದೇಶದಿಂದಲೇ ಸುವರ್ಣ ವಿಧಾನಸೌಧವನ್ನು ನಮ್ಮ ಸರ್ಕಾರವಿದ್ದಾಗಲೇ ಕಟ್ಟಲಾಗಿದ್ದು, ಈ ಭಾಗದ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು" ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಸರ್ಕಾರವಿದ್ದಾಗ ಇಲ್ಲಿಗೆ ಏನನ್ನೂ ಕೊಡುಗೆ ನೀಡಲಿಲ್ಲವಾದ್ದರಿಂದ ಸಿದ್ದರಾಮಯ್ಯ ಸುಮ್ಮನೆ ನಮ್ಮ ಸರ್ಕಾರದ ಮೇಲೆ ಆರೋಪ ಮಾಡುತ್ತಿದ್ದು, ಬೆಳಗಾವಿಗೆ ಏನಾದರೂ ಕೊಡುಗೆ ಕೊಟ್ಟಿದ್ದರೆ ಅವರು ತಿಳಿಸಲಿ" ಎಂದರು.
ಇನ್ನು "ಸುವರ್ಣ ವಿಧಾನಸೌಧಕ್ಕೆ ರಾಜ್ಯಮಟ್ಟದ ಕಚೇರಿಗಳನ್ನು ಸ್ಥಳಾಂತರಿಸಲು ಸ್ವಲ್ಪ ಸಮಯ ಕೊಡಿ. ಆ ನಿಟ್ಟಿನಲ್ಲಿ ಚರ್ಚೆ ನಡೆಯುತ್ತಿದೆ" ಎಂದು ಹೇಳಿದ್ದಾರೆ.