ಬೆಂಗಳೂರು, ಮಾ 31 DaijiworldNews/MS): ಕಳೆದ 29 ದಿನಗಳಿಂದ ರಾಜ್ಯಾದ್ಯಂತ ಚರ್ಚೆಯಲ್ಲಿದ್ದ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಯುವತಿ ಮಾ. 30ರಂದು ಮ್ಯಾಜಿಸ್ಟ್ರೇಟ್ ಮುಂದೆ ಹಾಜರಾಗಿ ಹೇಳಿಕೆ ದಾಖಲಿಸಿದ್ದು ಬಳಿಕ ಎಸ್ಐಟಿ ಅಧಿಕಾರಿಗಳು ಆಡುಗೋಡಿಯ ಟೆಕ್ನಿಕಲ್ ಸೆಂಟರ್ಗೆ ಕರೆತಂದು ಹೇಳಿಕೆ ದಾಖಲಿಸಿದ್ದಾರೆ.
ಇನ್ನು ಮಾ.31 ಬುಧವಾರ ಬೆಳಗ್ಗೆ 10 ಗಂಟೆಗೆ ಮತ್ತೊಮ್ಮೆ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದೆ. ಇಂದೇ ಎಸ್ಐಟಿ ವಿಚಾರಣೆಗೆ ಹಾಜರಾಗುವ ಯುವತಿಗೆ ಪೊಲೀಸರು ವೈದ್ಯಕೀಯ ಪರೀಕ್ಷೆ ಮಾಡಿಸಲಿದ್ದಾರೆ. ಈ ಮೂಲಕ ಅತ್ಯಾಚಾರ ಆಗಿರೋ ಕುರಿತು ವೈಜ್ಞಾನಿಕ ಸಾಕ್ಷ್ಯ ಕಲೆ ಹಾಕಲಿದ್ದಾರೆ. ಯುವತಿಯನ್ನು ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸುವ ಸಾಧ್ಯತೆ ಇದೆ.
ಯುವತಿ ತನಗೆ ಜೀವ ಬೆದರಿಕೆ ಇದೆ ಅಂತಾ ಹೇಳಿದ್ದ ಕಾರಣಕ್ಕೆ ಆಕೆಗೆ ಭಾರಿ ಭದ್ರತೆ ನೀಡಲಾಗಿದೆ. ಇದೇ ಕಾರಣಕ್ಕೆ ಯುವತಿ ಎಲ್ಲಿದ್ದಾಳೆ ಎಂಬ ಕುರಿತು ಮಾಹಿತಿಯನ್ನ ಗೌಪ್ಯವಾಗಿ ಇಡಲಾಗಿದೆ. ಈ ಕುರಿತು ಸಂತ್ರಸ್ತೆ ಪರ ವಕೀಲ ಜಗದೀಶ್ಗೂ ಕೋರ್ಟ್ ಕಟ್ಟಪ್ಪಣೆ ಹೊರಡಿಸಿ, ಯುವತಿ್ ತಂಗಿರುವ ಮಾಹಿತಿಯನ್ನು ಗೌಪ್ಯವಾಗಿ ಇಡುವಂತೆ ಹೇಳಿತ್ತು.