ಬೆಂಗಳೂರು, ಮಾ 31 (DaijiworldNews/MS): ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರಿಗೆ ಹಾಗೂ ಅವರ ಪತ್ನಿಗೆ ಕೊರೊನಾ ಸೋಂಕು ತಗುಲಿದೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರಿಗೆ ಹಾಗೂ ಅವರ ಪತ್ನಿಗೆ ಕೊರೊನಾ ಸೋಂಕು ತಗುಲಿದೆ. ಈ ಬಗ್ಗೆ ಟ್ವೀಟ್ ಮಾಡಿ ತಿಳಿಸಿರುವ ಹೆಚ್.ಡಿ.ದೇವೇಗೌಡ ತಮ್ಮ ಕುಟುಂಬ ಸದಸ್ಯರು ಐಷೋಲೇಷನ್ ಗೆ ಒಳಗಾಗಲಿದ್ದಾರೆ. ತಮ್ಮ ಸಂಪರ್ಕಕ್ಕೆ ಬಂದವರೆಲ್ಲರೂ ಕೊರೊನಾ ಟೆಸ್ಟ್ ಗೆ ಒಳಗಾಗುವಂತೆ ಸೂಚಿಸಿದ್ದಾರೆ
ಹೆಚ್.ಡಿ.ದೇವೇಗೌಡ ಅವರಿಗೆ 87ರ ವರ್ಷವಾಗಿದೆ. ಇನ್ನು ಈ ಬಗ್ಗೆ ಟ್ವೀಟ್ ಮಾಡಿರುವ ಡಾ. ಸುಧಾಕರ್, ಹಿರಿಯರು, ಮಾಜಿ ಪ್ರಧಾನಿಗಳಾದ ಎಚ್.ಡಿ.ದೇವೇಗೌಡರು ಹಾಗೂ ಅವರ ಧರ್ಮಪತ್ನಿ ಅವರಿಗೆ ಕೊರೊನಾ ಸೋಂಕು ಧೃಢಪಟ್ಟಿರುವ ಸುದ್ದಿ ತಿಳಿಯಿತು. ವೈದ್ಯರೊಂದಿಗೆ ನಿಕಟ ಸಂಪರ್ಕದಲ್ಲಿದ್ದು ಅವರ ಆರೋಗ್ಯದ ಬಗ್ಗೆ ಖುದ್ದಾಗಿ ಮಾಹಿತಿ ಪಡೆಯಲಿದ್ದೇನೆ. ಅವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಎಂದು ಹೇಳಿದ್ದಾರೆ.