ಬೆಂಗಳೂರು, ಮಾ 31 (DaijiworldNews/MS): ಆಪರೇಷನ್ ಕಮಲಕ್ಕಾಗಿ ಆಮಿಷ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ತನಿಖೆ ಕೈಗೊಳ್ಳಲು ಹೈಕೋರ್ಟ್ ಸಮ್ಮತಿ ನೀಡಿದೆ.
ಜೆಡಿಎಸ್ ಬಿಟ್ಟು ಬಿಜೆಪಿ ಸೆಳೆಯಲು ಆಮಿಷ ಒಡ್ಡಿದ್ದ ಬಗ್ಗೆ ಶಾಸಕ ನಾಗನಗೌಡ ಪುತ್ರ ಶರಣಗೌಡ ದೂರು ನೀಡಿದ್ದರು. ಬಿ.ಎಸ್ಯಡಿಯೂರಪ್ಪ, ಶಿವನಗೌಡ ನಾಯಕ್, ಪ್ರೀತಮ್ ಗೌಡ, ಎಂ.ಬಿ.ಮರಮಕಲ್ ವಿರುದ್ಧ ದೂರು ದಾಖಲಾಗಿತ್ತು.
ಈ ಬಗ್ಗೆ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಬಳಿಕ, ಪ್ರಕರಣವನ್ನು ರದ್ದು ಮಾಡಬೇಕೆಂದು ಕೋರಿ ಬಿ.ಎಸ್. ಯಡಿಯೂರಪ್ಪ ಅರ್ಜಿ ಸಲ್ಲಿಸಿದ್ದರು. ಆದರೆ ಇದೀಗ ಎಫ್ಐಆರ್ಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ತೆರವುಗೊಳಿಸಿದೆ. ನ್ಯಾಯಮೂರ್ತಿ ಜಾಮ್ ಮೈಕೆಲ್ ಕುನ್ಹಾ ಅವರ ಪೀಠ ತನಿಖೆಗೆ ಸಮ್ಮತಿ ನೀಡಿ ಆದೇಶ ಹೊರಡಿಸಿದೆ,