ಬೆಂಗಳೂರು, ಮಾ.31 (DaijiworldNews/MB) : ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) ತನ್ನ ಕ್ಯಾಬ್ನೊಳಗೆ ಬೆಂಕಿ ಹಾಕಿಕೊಂಡು ಟ್ಯಾಕ್ಸಿ ಚಾಲಕನು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಇಂಧನ ಬೆಲೆಯಲ್ಲಿ ತೀವ್ರ ಏರಿಕೆಯಿಂದಾಗಿ ತನ್ನ ಆದಾಯ ಕುಸಿಯುತ್ತಿದೆ ಎಂದು ಆರೋಪಿಸಿ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ.
ಪೊಲೀಸರ ಪ್ರಕಾರ, ಕರ್ನಾಟಕ ರಾಜಧಾನಿಯ ಗಡಿ ಜಿಲ್ಲೆ ರಾಮನಗರ ಮೂಲದ ಮೃತ ಪ್ರತಾಪ್ ಗೌಡ (35) ಮಂಗಳವಾರ ಬೆಂಕಿ ಹಚ್ಚಿದ್ದಾರೆ.
ಪ್ರತಾಪ್ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಲ್ಲಿ (ಕೆಎಸ್ಟಿಡಿಸಿ) ದ ಕ್ಯಾಬ್ ಚಾಲಕನಾಗಿದ್ದ. ಆತ ತನ್ನ ಕಾರಿನೊಳಗೆ ಕೂತು ಕಾರು ಲಾಕ್ ಮಾಡಿಕೊಂಡು ತನಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡಿದ್ದಾನೆ. ಆತ ಶೇ 70 ರಷ್ಟು ಸುಟ್ಟು ಹೋಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಕ್ಯಾಬ್ ಚಾಲಕ ಕಡಿಮೆ ಆದಾಯದಿಂದ ಬೇಸರಗೊಂಡಿದ್ದ. ಆದ್ದರಿಂದ ಈ ಆತ್ಮಹತ್ಯೆ ಮಾಡಿದ್ದಾನೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ರಸ್ತೆ ಮಧ್ಯದಲ್ಲೇ ಕಾರನ್ನು ನಿಲ್ಲಿಸಿದ್ದ ಪ್ರತಾಪ್ ಕಾರಿನ ಕಿಟಕಿಯನ್ನು ಮುಚ್ಚಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ. ಇತರ ಚಾಲಕರು ಆತನ ರಕ್ಷಣೆಗೆ ಧಾವಿಸಿ, ವಿಂಡ್ಶೀಲ್ಡ್ ತೆರೆದು, ಬೆಂಕಿಯನ್ನು ನಂದಿಸಿ ಆತನನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.
ಏತನ್ಮಧ್ಯೆ ಬಾಡಿಗೆ ದೊರೆಯದೇ ಆರ್ಥಿಕ ಸಂಕಷ್ಟಕ್ಕೀಡಾಗಿದ್ದ ಕೆಎಸ್ಟಿಡಿಸಿ ಕ್ಯಾಬ್ ಚಾಲಕ ಪ್ರತಾಪ್ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಮಧ್ಯರಾತ್ರಿ ಅವರು ಕೊನೆಯುಸಿರೆಳೆದಿದ್ದಾರೆ. ಪ್ರತಾಪ್ ಅವರ ಸಾವಿನೊಂದಿಗೆ ಕೆಎಸ್ಟಿಡಿಸಿ ಚಾಲಕರ ಸಮಸ್ಯೆಗಳು ತೆರೆದುಕೊಂಡಿವೆ ಎಂದು ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ – 9152987821