ನವದೆಹಲಿ, ಎ 1(DaijiworldNews/MS): ಸುಕನ್ಯಾ ಸಮೃದ್ಧಿ ಯೋಜನೆ, ರಾಷ್ಟ್ರೀಯ ಉಳಿತಾಯ ಪತ್ರ, ಪಿಪಿಎಫ್, ನಿಗದಿತ ಠೇವಣಿ, ಉಳಿತಾಯ ಖಾತೆ ಸೇರಿದಂತೆ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರ ಕಡಿತದ ಆದೇಶವನ್ನು ಸರ್ಕಾರ ಹಿಂಪಡೆದಿರುವುದಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ಎ.1 ರ ಗುರುವಾರ ಬೆಳಗ್ಗೆ ಟ್ವೀಟ್ ಮಾಡಿರುವ ವಿತ್ತ ಸಚಿವೆ ಭಾರತ ಸರ್ಕಾರದ ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿದರಗಳು 2021-21 ನಾಲ್ಕನೇ ತ್ರೈಮಾಸಿಕದಲ್ಲಿ ಅಂದರೆ 2021ರ ಮಾರ್ಚ್ವರೆಗೆ ಇದ್ದ ದರಗಳು ಮುಂದುವರೆಯಲಿವೆ ಎಂದು ಹೇಳಿದ್ದಾರೆ.
ಈ ಹಿಂದೆ ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿ ದರ ಗರಿಷ್ಠ ಶೇ.1.1ರವರೆಗೆ ಇಳಿಕೆ ಮಾಡಲಾಗಿತ್ತು. ಪರಿಷ್ಕೃತ ಬಡ್ಡಿ ದರಗಳು ಏಪ್ರಿಲ್ 1 ರಿಂದ ಅನ್ವಯ ಆಗಲಿದ್ದು, ಏಪ್ರಿಲ್- ಜೂನ್ ತ್ರೈಮಾಸಿಕದಲ್ಲಿ ಜಾರಿಯಲ್ಲಿ ಇರಲಿದೆ ಎಂದು ಹೇಳಲಾಗಿತ್ತು.
2021-22 ನಾಲ್ಕನೇ ತ್ರೈಮಾಸಿಕದಲ್ಲಿ ಅಂದರೆ 2021ರ ಮಾರ್ಚ್ವರೆಗೆ ಇದ್ದ ದರಗಳು ಮುಂದುವರೆಯಲಿವೆ ಎಂದು ಹೇಳಿದ್ದಾರೆ .2020-21ರ ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ, ಸರ್ಕಾರವು ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರವನ್ನು ಶೇಕಡಾ 0.70-1.4 ರಷ್ಟು ಕಡಿತಗೊಳಿಸಿತ್ತು.