ಬೆಂಗಳೂರು, ಏ.01 (DaijiworldNews/HR): "ಮುಖ್ಯಮಂತ್ರಿಗಳ ವಿರುದ್ದ ಕೆ.ಎಸ್. ಈಶ್ವರಪ್ಪನವರಂತಹ ಹಿರಿಯ ಸಚಿವರೇ ರಾಜ್ಯಪಾಲರಿಗೆ ಪತ್ರ ಬರೆಯುತ್ತಾರೆ ಎಂದರೆ ಹೇಗೆ? ಈ ವಿಷಯವನ್ನು ನಾಲ್ಕು ಗೋಡೆಗಳ ನಡುವೆ ಚರ್ಚೆ ಮಾಡಿ ಬಗೆ ಹರಿಸಿಕೊಳ್ಳಬೇಕಿತ್ತು" ಎಂದು ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಉಪಚುನಾವಣೆ ನಡೆಯುತ್ತಿರುವ ಈಗಿನ ಸಂದರ್ಭದಲ್ಲಿ ಸಚಿವರು ಈ ರೀತಿಯಾಗಿ ಮಾಡಿರುವುದರಿಂದ ಚುನಾವಣೆ ಮೇಲೆ ಪರಿಣಾಮ ಬೀರಿ ಪಕ್ಷಕ್ಕೆ ಕೆಟ್ಟ ಹೆಸರು ಬರುತ್ತದೆ" ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇನ್ನು "ಮುಖ್ಯಮಂತ್ರಿಗಳನ್ನು ನಾವು 60 ಮಂದಿ ಶಾಸಕರು ಭೇಟಿ ಮಾಡಿ ಅನುದಾನಕ್ಕೆ ಮನವಿ ಮಾಡಿದ್ದರಿಂದ ಅವರು ಬಿಡುಗಡೆ ಮಾಡಿದ್ದಾರೆ ಅದರಲ್ಲಿ ತಪ್ಪೇನಿದೆ? ಅದಕ್ಕೂ ಮೊದಲು ಈಶ್ವರಪ್ಪನವರಿಗೂ ಭೇಟಿ ಮಾಡಿ ಮನವಿ ಮಾಡಿದ್ದೆವು. ಆದರೆ ಅದಕ್ಕೆ ಅವರು ಸ್ಪಂದಿಸಿರಲಿಲ್ಲ. ಹಾಗಾಗಿ ವಿಧಿಯಿಲ್ಲದೆ ಸಿಎಂರನ್ನು ಭೇಟಿ ಮಾಡಬೇಕಾಯ್ತು" ಎಂದು ಹೇಳಿದ್ದಾರೆ.