ಬೆಂಗಳೂರು, ಎ 1 (DaijiworldNews/SM): ಬೆಂಗಳೂರಿನಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಗರಕ್ಕೆ ಸೀಮಿತವಾಗಿರುವಂತೆ 6ನೇ ತರಗತಿಗಳಿಂದ 9ನೇ ತರಗತಿ ತನಕ ರಜೆ ಘೋಷಿಸಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಆದೇಶ ನೀಡಿದ್ದಾರೆ.
ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿರುವ ಸಚಿವರು, ವಿದ್ಯಾರ್ಥಿಗಳ ಹಿತದೃಷ್ಠಿಯನ್ನು ಗಮನದಲ್ಲಿಟ್ಟುಕೊಂಡು ಬೆಂಗಳೂರಿನಲ್ಲಿ ಆರನೇ ತರಗತಿಯಿಂದ ಒಂಬತ್ತನೇ ತರಗತಿ ತನಕ ರಜೆ ಘೋಷಣೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಇತರ ಪ್ರದೇಶದ ಪರಿಸ್ಥಿತಿಯನ್ನು ಅವಲೋಕಿಸಿ ನಿರ್ಧಾರವನ್ನು ಕೈಗೊಳ್ಳಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಇನ್ನುಳಿದಂತೆ ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿ ತರಗತಿಗಳು ಎಂದಿನಂತೆ ನಡೆಯಲಿವೆ. ಅಲ್ಲದೆ, ಈಗಾಗಲೇ ನಿಗಧಿಯಾಗಿರುವಂತೆ ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿ ಪರೀಕ್ಷೆಗಳ ನಡೆಯಲಿವೆ ಎಂದು ಸಚಿವರು ತಿಳಿಸಿದ್ದಾರೆ.