ಬೆಂಗಳೂರು, ಎ 1 (DaijiworldNews/SM): ಸಿಎಂ ವಿರುದ್ಧ ತಿರುಗಿ ಬಿದ್ದಿರುವ ಸಚಿವ ಈಶ್ವರಪ್ಪ ನಿರ್ಧಾರದ ವಿರುದ್ಧ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗರಂ ಆಗಿದ್ದಾರೆ. ಅಲ್ಲದೆ, ಈಶ್ವರಪ್ಪ ಅವರನ್ನು ಸಚಿವ ಸ್ಥಾನದಿಂದ ಕೈ ಬಿಡುವ ಎಚ್ಚರಿಕೆಯನ್ನು ಕೂಡ ನೀಡಿದ್ದಾರೆ.
ಈ ಮಧ್ಯೆ ಯಡಿಯೂರಪ್ಪ ನಡೆಯಿಂದ ಇನ್ನಷ್ಟು ಆಕ್ರೋಶಗೊಂಡಿರುವ ಸಚಿವ ಕೆ.ಎಸ್. ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದಾರೆ.
ತಮ್ಮ ವಿರುದ್ದ ದೂರು ಆರೋಪ ಹಿನ್ನಲೆಯಲ್ಲಿ ಸಿಎಂ ಸಚಿವರು ಹಾಗೂ ಶಾಸಕರ ಸಭೆ ನಡೆಸಿದರು. ಯಡಿಯೂರಪ್ಪ ಅವರ ಸಭೆ ಹಿನ್ನೆಲೆಯಲ್ಲಿ ಪೂರ್ವ ನಿಗದಿತ ಕಾರ್ಯಕ್ರಮಗಳನ್ನು ರದ್ದು ಮಾಡಿದ ಸಚಿವರು, ಶಾಸಕರು ಸಿಎಂ ಜೊತೆ ಸೇರಿ ಭರವಸೆ ಮೂಡಿಸಿದರು.
ಈ ನಡುವೆ ತಮ್ಮ ವಿರುದ್ಧ ತಿರುಗಿ ಬಿದ್ದಿರುವ ಈಶ್ವರಪ್ಪ ಅವರ ವಿರುದ್ಧ ಸಿಎಂ ಗರಂ ಆದರು.ಈಶ್ವರಪ್ಪ ವಿರುದ್ಧ ಹರಿಹಾಯ್ದ ಸಿಎಂ ಅವರ ಖಾತೆ ಹಿಂಪಡೆಯುತ್ತೇನೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಜಾಸ್ತಿ ಮಾತನಾಡಿದರೆ ಸಂಪುಟದಿಂದಲೇ ಕೈ ಬಿಡುತ್ತೇನೆ ಎಂದು ವಾಗ್ದಾಳಿ ನಡೆಸಿದರು.