ಮುಂಬೈ, ಏ.02 (DaijiworldNews/HR): ದೇಶಾದ್ಯಂತ ಕೊರೊನಾ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಇದೀಗ ಬಾಲಿವುಡ್ ನಟಿ ಆಲಿಯಾ ಭಟ್ಗೂ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಕುರಿತು ತಮ್ಮ ಇನ್ಸ್ಟಾಗ್ರಾಂನಲ್ಲಿ ಮಾಹಿತಿ ಹಂಚಿಕೊಂಡಿರುವ ಆಲಿಯಾ ಭಟ್, "ನನಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ನಾನೀಗ ಹೋಂ ಕ್ವಾರಂಟೈನ್ನಲ್ಲಿದ್ದೇನೆ. ವೈದ್ಯರ ಸಲಹೆಯಂತೆ ಸುರಕ್ಷತಾ ಕ್ರಮಗಳನ್ನು ಕೈಗೊಂಡಿದ್ದೇನೆ" ಎಂದು ತಿಳಿದಿದ್ದಾರೆ.
ಇನ್ನು ಇತ್ತೀಚೆಗೆ ನನ್ನ ಸಂಪರ್ಕದಲ್ಲಿರುವ ಎಲ್ಲರೂ ತಕ್ಷಣ ಕೊರೊನಾ ಪರೀಕ್ಷೆಗೆ ಒಳಗಾಗುವಂತೆ ಮನವಿ ಮಾಡಿಕೊಂಡಿದ್ದಾರೆ.