ಧಾರವಾಡ, ಎ.02 (DaijiworldNews/PY): "ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಬೆಳಗಾವಿ ಲೋಕಸಭೆ ಉಪಚುನಾವಣೆಯ ಪ್ರಚಾರಕ್ಕೆ ಬರುತ್ತಾರೆ" ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ರಮೇಶ್ ಜಾರಕಿಹೊಳಿ ಅವರು ಬೆಳಗಾವಿ ಲೋಕಸಭೆ ಚುನಾವಣೆಯ ಪ್ರಚಾರಕ್ಕೆ ಬರಲಿದ್ದಾರೆ. ಅಂಗಡಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾದ ಮಂಗಲಾ ಅವರು ನಾಲ್ಕು ಲಕ್ಷ ಮತಗಳಿಂದ ಜಯ ಗಳಿಸಲಿದ್ದಾರೆ" ಎಂದಿದ್ದಾರೆ.
ಚುನಾವಣೆ ಪ್ರಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, "ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಯ ಹಿನ್ನೆಲೆ ಅವರಿಗೆ ಪ್ರಚಾರಕ್ಕೆ ಬರಲು ಆಗಿಲ್ಲ. ಈ ಬಗ್ಗೆ ಅವರೊಂದಿಗೆ ನಾನೇ ಮಾತನಾಡಿದ್ದು, ಬೆಳಗಾವಿ ಲೋಕಸಭೆ ಚುನಾವಣೆಯ ಪ್ರಚಾರಕ್ಕೆ ಬರುವುದಾಗಿ ತಿಳಿಸಿದ್ದಾರೆ" ಎಂದು ಹೇಳಿದ್ದಾರೆ.