ನವದೆಹಲಿ,ಏ.02 (DaijiworldNews/HR): ಅಸ್ಸಾಂನಲ್ಲಿ ಗುರುವಾರ ಎರಡನೇ ಹಂತದ ಮತದಾನ ಮುಕ್ತಾಯವಾಗಿ ಕೆಲವೇ ಗಂಟೆಗಳಲ್ಲಿ ಬಿಜೆಪಿ ಅಭ್ಯರ್ಥಿಯ ಕಾರಿನಲ್ಲಿ ವಿದ್ಯುನ್ಮಾನ ಮತ ಯಂತ್ರ(ಇವಿಎಂ)ಗಳು ಪತ್ತೆಯಾಗಿದ್ದು, ನಾಲ್ವರು ಅಧಿಕಾರಿಗಳನ್ನು ಆಯೋಗವು ಅಮಾನತುಗೊಳಿಸಿದೆ.
ಈ ಕುರಿತು ಅಸ್ಸಾಂ ಮೂಲದ ಪತ್ರಕರ್ತ ಅತಾನು ಭುಯಾನ್ ಇವಿಎಂಗಳಿರುವ ಕಾರಿನ ವಿಡಿಯೋವನ್ನು ಟ್ವೀಟ್ ಮಾಡಿದ್ದು, ಈ ಘಟನೆಯ ಬಳಿಕ ಪಥರ್ಕಾಂಡಿ ಕ್ಷೇತ್ರದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ' ಎಂದಿದ್ದಾರೆ.
ಇವಿಎಂಗಳಿದ್ದ ಬೊಲೆರೊ ಕಾರು ಬಿಜೆಪಿ ಅಭ್ಯರ್ಥಿ ಕೃಷ್ಣೆಂದು ಪೌಲ್ ಅವರಿಗೆ ಸೇರಿದ್ದು ಎಂದು ಆರೋಪಿಸಲಾಗಿದೆ.
ಇನ್ನು "ಈ ಘಟನೆಗೆ ಸಂಬಂಧಿಸಿದಂತೆ ಇಂಥ ದೂರುಗಳ ಬಗ್ಗೆ ಚುನಾವಣಾ ಆಯೋಗ ನಿರ್ಣಾಯಕ ಕ್ರಮಗಳನ್ನು ಕೈಗೊಳ್ಳಬೇಕು"ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಒತ್ತಾಯಿಸಿದ್ದಾರೆ.