ಗ್ವಾಲಿಯರ್, ಏ.02 (DaijiworldNews/HR): ಮಧ್ಯಪ್ರದೇಶದ ಗ್ವಾಲಿಯರ್ ಜಿಲ್ಲೆಯ ಹಳ್ಳಿಯೊಂದರಲ್ಲಿ ನಕಲಿ ಮದ್ಯ ಸೇವಿಸಿ ಇಬ್ಬರು ಸಾವನ್ನಪ್ಪಿ, ನಾಲ್ವರು ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ.
ಸಾಂಧರ್ಭಿಕ ಚಿತ್ರ
ಸಾವನ್ನಪ್ಪಿದವರನ್ನು ಪ್ರದೀಪ್ ಅಹಿವಾರ್ ಮತ್ತು ವಿಜಯ್ ಕೇಶವ್ ಎಂದು ಗುರುತಿಸಲಾಗಿದೆ.
ಮಹಾರಾಜಪುರ ಪೊಲೀಸ್ ಠಾಣೆ ವ್ಯಾಪ್ತಿಯ ಚಂದುಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಬಲಿಯಾದವರಲ್ಲಿ ಒಬ್ಬರು ಎರಡು ದಿನಗಳ ಹಿಂದೆ ಗ್ರಾಮದಲ್ಲಿ ಸಾವನ್ನಪ್ಪಿದ್ದರೇ, ಇನ್ನೊಬ್ಬರು ಬುಧವಾರ ರಾತ್ರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇನ್ನು ಕುಡಿದ ಬಳಿಕ ಅನಾರೋಗ್ಯಕ್ಕೆ ಒಳಗಾದವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಾಲ್ವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ನಕಲಿ ಮದ್ಯ ಸೇವನೆಯಿಂದ ಹೀಗೆ ಆಗಿರಬಹುದೆಂದು ಹೇಳಲಾಗುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಸಂಘಿ ಹೇಳಿದ್ದಾರೆ.