ಶ್ರೀನಗರ, ಏ.02 (DaijiworldNews/HR): ಭದ್ರತಾ ಪಡೆಯು ಎನ್ಕೌಂಟರ್ ನಡೆಸಿ, ಮೂವರು ಉಗ್ರರನ್ನು ಹತ್ಯೆ ಮಾಡಿದ ಘಟನೆ ಜಮ್ಮು ಮತ್ತು ಕಾಶ್ಮೀರ ಪುಲ್ವಾಮ ಜಿಲ್ಲೆಯ ಕಾಕಾಪೋರಾ ಪ್ರದೇಶದಲ್ಲಿ ಶುಕ್ರವಾರ ನಡೆದಿದೆ ಎಂದು ತಿಳಿದು ಬಂದಿದೆ.
ಸಾಂಧರ್ಭಿಕ ಚಿತ್ರ
3-4 ಉಗ್ರರು ಕಾಕಾಪೋರಾದಲ್ಲಿ ಅಡಗಿ ಕುಳಿತಿರುವ ಕುರಿತು ಖಚಿತ ಮಾಹಿತಿ ಮೇರೆಗೆ ಸ್ಥಳವನ್ನು ಸುತ್ತುವರೆದಿದ್ದ ಭದ್ರತಾ ಪಡೆಗಳು ಇದೀಗ ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎನ್ನಲಾಗಿದೆ.
ಜಮ್ಮು ಮತ್ತು ಕಾಶ್ಮೀರ ಪೊಲೀಸರು, ಸಿಆರ್ಪಿಎಫ್ ಹಾಗೂ ಸೇನಾಪಡೆ ಜಂಟಿಯಾಗಿ ಕಾರ್ಯಾಚರಣೆಗೆ ಇಳಿದಿದ್ದು, ಈ ವೇಳೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದರು. ಕೂಡಲೇ ಉಗ್ರರು ಪರಾರಿಯಾಗದಂತೆ ಸ್ಥಳವನ್ನು ಸುತ್ತುವರೆದು ಎನ್ಕೌಂಟರ್ ಆರಂಭಿಸಲಾಗಿತ್ತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇನ್ನು ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದ್ದು, ಹತ್ಯೆಯಾದ ಉಗ್ರರಿಂದ ಸ್ಫೋಟಕ ವಸ್ತುಗಳು ಹಾಗೂ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ.