ನವದೆಹಲಿ, ಏ.02 (DaijiworldNews/HR): ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಗಂಡ ರಾಬರ್ಟ್ ವಾದ್ರಾಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಹಿನ್ನಲೆ ಪ್ರಿಯಾಂಕಾ ಗಾಂಧಿ ಕೂಡ ಹೋಮ್ ಐಸೋಲೇಷನ್ಗೆ ಒಳಗಾಗಿದ್ದಾರೆ.
ಈ ಬಗ್ಗೆ ರಾಬರ್ಟ್ ವಾದ್ರಾ ತಮ್ಮ ಫೇಸ್ಬುಕ್ ಮೂಲಕ ಮಾಹಿತಿ ನೀಡಿದ್ದು, "ತಮಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಲಕ್ಷಣ ರಹಿತ ಕೊರೊನಾ ಸೋಂಕು ಪತ್ತೆಯಾಗಿದೆ" ಎಂದು ತಿಳಿಸಿದ್ದಾರೆ.
ಇನ್ನು ರಾಬರ್ಟ್ ವಾದ್ರಾಗೆ ಸೋಂಕು ಪತ್ತೆಯಾದ ಹಿನ್ನಲೆ ಪ್ರಿಯಾಂಕಾ ಗಾಂಧಿ ಕೂಡ ಕ್ವಾರಂಟೈನ್ಗೆ ಒಳಗಾಗಿದ್ದು, ಮುಂದಿನ ಕೆಲವು ದಿನಗಳ ಕಾಲ ತಾವು ಪ್ರತ್ಯೇಕ ವಾಸದ ಮೊರೆ ಹೋಗುತ್ತಿದ್ದೇನೆ. ಈ ಹಿನ್ನಲೆ ಚುನಾವಣಾ ಕಾರ್ಯಗಳಿಂದ ದೂರ ಸರಿಯುತ್ತಿದ್ದೇನೆ. ಈ ಅನಾನುಕೂಲಕ್ಕೆ ಕ್ಷಮೆಯಾಚಿಸುತ್ತೇನೆ ಎಂದು ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.