ಅಸ್ಸಾಂ, ಎ.03 (DaijiworldNews/PY): "ಅಸ್ಸಾಂನಲ್ಲಿ ಯಾವುದೇ ಬಿಜೆಪಿ ನಾಯಕ ತಪ್ಪು ಮಾಡಿದ್ದರೆ ಚುನಾವಣಾ ಆಯೋಗ ಕಠಿಣ ಕ್ರಮ ಕೈಗೊಳ್ಳಬೇಕು" ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅವರು, ಅಸ್ಸಾಂನಲ್ಲಿ ನಡೆದ ಇವಿಎಂ ವಿವಾದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.
"ನನಗೆ ಈ ಪ್ರಕರಣದ ಬಗ್ಗೆ ಮಾಹಿತಿ ಇಲ್ಲ. ನಿನ್ನೆ ದಕ್ಷಿಣ ಭಾರತದಲ್ಲಿ ಪ್ರಚಾರ ಮಾಡುತ್ತಿದೆ. ಚುನಾವಣಾ ಆಯೋಗ ಯಾವುದೇ ಕ್ರಮ ಕೈಗೊಳ್ಳದಂತೆ ನಾವು ತಡೆದಿಲ್ಲ. ನೀವು ಹೇಳುವ ಮಾತು ನಿಜವಾಗಿದ್ದರೆ, ಚುನಾವಣಾ ಆಯೋಗವು ಕಾನೂನಿನ ಪ್ರಕಾರ ಕ್ರಮ ತೆಗೆದುಕೊಳ್ಳಬೇಕು. ಇದರಲ್ಲಿ ಪಾಲ್ಗೊಂಡವರ ವಿರುದ್ದವೂ ಕ್ರಮ ಕೈಗೊಳ್ಳಬೇಕು" ಎಂದು ತಿಳಿಸಿದ್ದಾರೆ.
ಗುರುವಾರ ಸಂಜೆ ಬಿಜೆಪಿ ಅಭ್ಯರ್ಥಿ ಕೃಷ್ಣೇಂದು ಪಾಲ್ ಅವರ ಪತ್ನಿಗೆ ಸೇರಿದ ಕಾರಿನಲ್ಲಿ ಇವಿಎಂ ಯಂತ್ರವನ್ನು ತೆಗೆದುಕೊಂಡು ಹೋಗುತ್ತಿದ್ದ ಸಂದರ್ಭ ಅಸ್ಸಾಂನ ಮತಗಟ್ಟೆ ಅಧಿಕಾರಿಗಳು ಸಿಕ್ಕಿಬಿದ್ದಿದ್ದಾರೆ.
ಇದು ಇವಿಎಂ ತಿರುಚುವ ಪ್ರಯತ್ನ ಇದಾಗಿದೆ ಎಂದು ಪ್ರತಿಪಕ್ಷಗಳು ಬಣ್ಣಿಸಿವೆ.