ನವದೆಹಲಿ, ಎ.03 (DaijiworldNews/PY): "ದೇಶದಲ್ಲಿ ಇಲ್ಲಿಯವರೆಗೆ ಒಟ್ಟು 7,06,18,026 ಡೋಸ್ ಲಸಿಕೆ ನೀಡಲಾಗಿದೆ. ಈ ಪೈಕಿ 6,13,56,345 ಮಂದಿ ಮೊದಲ ಡೋಸ್ ಪಡೆದಿದ್ದಾರೆ. 92,61,681 ಮಂದಿಗೆ ಲಸಿಕೆಯ ಎರಡನೇ ಡೋಸ್ ನೀಡಲಾಗಿದೆ" ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಸಾಂದರ್ಭಿಕ ಚಿತ್ರ
"ಈವರೆಗೆ ಸುಮಾರು 89,03,809 ಆರೋಗ್ಯ ಕಾರ್ಯಕರ್ತರು ಹಾಗೂ ಸುಮಾರು 95,15,410 ಮುಂಚೂಣಿ ಕಾರ್ಯಕರ್ತರಿಗೆ ಕೊರೊನಾ ಲಸಿಕೆಯ ಮೊದಲ ಡೋಸ್ ನೀಡಲಾಗಿದೆ. 52,86,132 ಆರೋಗ್ಯ ಕಾರ್ಯಕರ್ತರು ಹಾಗೂ 39,75,549 ಮುಂಚೂಣಿ ಕಾರ್ಯಕರ್ತರು ಎರಡನೇ ಡೋಸ್ ಪಡೆದುಕೊಂಡಿದ್ದು, 45 ವರ್ಷ ಮೇಲ್ಪಟ್ಟ ಸುಮಾರು 4,29,37,126 ಮಂದಿಗೆ ಲಸಿಕೆಯ ಮೊದಲ ಡೋಸ್ ನೀಡಲಾಗಿದೆ" ಎಂದು ಹೇಳಿದೆ.
"ಬೃಹತ್ ಲಸಿಕಾ ಅಭಿಯಾನದಲ್ಲಿ ಶುಕ್ರವಾರ ರಾತ್ರಿ 8 ಗಂಟೆಯವರೆಗೆ ಸುಮಾರು 12,76,191 ಲಸಿಕೆ ನೀಡಲಾಗಿದೆ. ಈ ಪೈಕಿ 12,40,764 ಮೊದಲ ಡೋಸ್ ಪಡೆದುಕೊಂಡಿದ್ದು, 35,427 ಮಂದಿ ಎರಡನೇ ಡೋಸ್ ಪಡೆದಿದ್ದಾರೆ" ಎಂದು ಸಚಿವಾಲಯ ತಿಳಿಸಿದೆ.
"ಎಪ್ರಿಲ್ 1ರಂದು 45 ವರ್ಷ ಮೇಲ್ಪಟ್ಟ ಒಟ್ಟು 36.7 ಲಕ್ಷಕ್ಕೂ ಅಧಿಕ ಮಂದಿಗೆ ಲಸಿಕೆ ನೀಡಲಾಗಿದೆ. ಎಪ್ರಿಲ್ 2ರಂದು 11,83,917 ಮಂದಿಗೆ ಲಸಿಕೆ ನೀಡಲಾಗಿದೆ" ಎಂದು ವಿವರಿಸಿದೆ.
ಜ.16ರಂದು ಆರಂಭವಾದ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಲಾಗಿದ್ದು, ಫೆ.2ರಂದು ಮುಂಚೂಣಿ ಕಾರ್ಮಿಕರಿಗೆ ಕೊರೊನಾ ಲಸಿಕೆ ನೀಡಲು ಪ್ರಾರಂಭಿಸಲಾಯಿತು.