ಬೆಳಗಾವಿ, ಏ 3(DaijiworldNews/MS): ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಕೇಳಿ ಬಿಜೆಪಿಯೂ ಆಡಳಿತ ನಡೆಸುತ್ತಿಲ್ಲ ಎಂದು ಡಿಸಿಎಂ ಗೋವಿಂದ ಕಾರಜೋಳ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಆಡಳಿತ ಉತ್ತಮವಾಗಿದ್ದರೆ, ಅವರು ಸಂಜೆಯ ವೇಳೆಗೆ ಈಶ್ವರಪ್ಪ ಅವರನ್ನು ವಜಾಗೊಳಿಸಲಿ ಎಂಬ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಗೆ ಬೆಳಗಾವಿಯಲ್ಲಿ ತಿರುಗೇಟು ನೀಡಿದ ಅವರು, ಅವರನ್ನು ಕೇಳಿ ಸರ್ಕಾರ ಆಡಳಿತ ನಡೆಸುತ್ತಿಲ್ಲ ಎಂದರು.
ಬೆಳಗಾವಿಯಲ್ಲಿ ನಡೆಯುತ್ತಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಬಿಜೆಪಿ ಪದಾಧಿಕಾರಿಗಳ ಹಾಗೂ ಪ್ರಮುಖರ ಸಭೆಗೂ ಮುನ್ನ ಮಾತನಾಡಿದ ಅವರು, ಕಾಂಗ್ರೆಸ್ ಅಸ್ಪೃಶ್ಯ, ಹಿಂದುಳಿದವರನ್ನು ಮೇಲೆತ್ತುವ ಪ್ರಯತ್ನ ಎಂದೂ ಮಾಡಲಿಲ್ಲ, ಈ ವರ್ಗಕ್ಕೆ ಶಿಕ್ಷಣ ಕೊಟ್ಟರೆ ವೋಟ್ಬ್ಯಾಂಕ್ ಕಳೆದುಕೊಳ್ಳುತ್ತೇವೆಂಬ ಆತಂಕದಲ್ಲಿದರು. ಹೀಗಾಗಿ ಪರಿಶಿಷ್ಟ ಜಾತಿ ಜನಾಂಗದವರು ಈಗ ಬಿಜೆಪಿ ಬೆಂಬಲಿಸುತ್ತಿದ್ದಾರೆ ಎಂದಿದ್ದಾರೆ.
ಇನ್ನು ಸ್ವಾತಂತ್ರ್ಯ ಬಂದ ಬಳಿಕ ಡಾ.ಬಾಬಾಸಾಹೇಬ ಅಂಬೇಡ್ಕರ್ಗೆ ಕಾಂಗ್ರೆಸ್ ಯಾವ ರೀತಿ ಅವಮಾನಿಸಿದೆ ಎಲ್ಲರಿಗೂ ಗೊತ್ತು. ಅಂಬೇಡ್ಕರ್ ಶವಸಂಸ್ಕಾರಕ್ಕೆ ಮುಂಬೈನಲ್ಲಿ ಕಾಂಗ್ರೆಸ್ ಪಕ್ಷದವರು ಆರಡಿ ಮೂರಡಿ ಜಾಗ ಕೊಡಲಿಲ್ಲ, ಅಸ್ಪೃಶ್ಯರು ಹಿಂದುಳಿದವರು ದಲಿತರು, ಕಾಂಗ್ರೆಸ್ ತಿರಸ್ಕಾರ ಮಾಡಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.