ನವದೆಹಲಿ, ಏ.03 (DaijiworldNews/HR): ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಅನಾರೋಗ್ಯದ ಹಿನ್ನಲೆ ದೆಹಲಿಯ ಏಮ್ಸ್ ಆಸ್ಪತ್ರೆಗೆ ಚಿಕಿತ್ಸೆ ಪಡೆಯುತ್ತಿದ್ದು, ಅವರನ್ನು ಶನಿವಾರ ಐಸಿಯುನಿಂದ ವಿಶೇಷ ಕೊಠಡಿಗೆ ವರ್ಗಾಯಿಸಲಾಗಿದೆ ಎಂದು ತಿಳಿದು ಬಂದಿದೆ.
ಈ ಕುರಿತು ಟ್ವೀಟ್ ಮಾಡಿರುವ ರಾಷ್ಟ್ರಪತಿ ಭವನ, "ರಾಷ್ಟ್ರಪತಿಗಳು ಏಮ್ಸ್ ಆಸ್ಪತ್ರೆಯಲ್ಲಿ ಬೈಪಾಸ್ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಇದೀಗ ಅವರ ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆ. ವೈದ್ಯರು ನಿಗಾ ಇರಿಸಿದ್ದು ವಿಶ್ರಾಂತಿ ತೆಗೆದುಕೊಳ್ಳುವಂತೆ ಸಲಹೆ ನೀಡಿದ್ದಾರೆ" ಎಂದು ತಿಳಿಸಿದೆ.
ಕೋವಿಂದ್ ಅವರಿಗ್ ಮೊದಲಿಗೆ ಎದೆಯಲ್ಲಿ ನೋವು ಕಾಣಿಸಿಕೊಂಡು ಆರ್ಮಿ ಆಸ್ಪತ್ರೆಗೆ ದಾಖಲಾಗಿದ್ದು, ಅಲ್ಲಿಂದ ವೈದ್ಯರು ಏಮ್ಸ್ ಆಸ್ಪತ್ರೆಗೆ ಸೇರುವಂತೆ ಸಲಹೆ ನೀಡಿದ್ದರು.