ಶಿವಮೊಗ್ಗ, ಏ.03 (DaijiworldNews/HR): ಮಾಜಿ ಮುಖ್ಯಮಂತ್ರಿ ಸಿದ್ದಾಮಯ್ಯನವರು ಸಿಎಂ ಆಗೋದಕ್ಕಾಗಿ ಯಡಿಯೂರಪ್ಪ ರಾಜೀನಾಮೆ ನೀಡಿ ಅಂತಿದ್ದಾರೆ. ಈ ಬಳಿಕ ನಾನೇ ಸಿಎಂ ಆಗಬಹುದು ಅಂತ ಅಂದುಕೊಂಡಿದ್ದಾರೆ. ಆದರೆ ಯಡಿಯೂರಪ್ಪ ರಾಜೀನಾಮೆ ನೀಡೋ ಪ್ರಶ್ನೆ ಇಲ್ಲ. ಸಿದ್ದರಾಮಯ್ಯ ಸಿಎಂ ಆಗುವ ಭ್ರಮೆ ಇಟ್ಟುಕೊಳ್ಳಬೇಡಿ" ಎಂದು ಸಚಿವ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ನಮ್ಮಲ್ಲಿ ಆಡಳಿತಾತ್ಮಕವಾಗಿ ಇರೋ ಸಮಸ್ಯೆಗಳನ್ನು ನಾವು ಬಗೆಹರಿಸಿಕೊಳ್ಳುತ್ತೇವೆ. ವಿಪಕ್ಷದವರಿಗೆ ಬಿಜೆಪಿಯ ಬಗ್ಗೆ ಮಾತನಾಡಬೇಡಿ, ನಾವು ಸಂಘಟನಾತ್ಮಕವಾಗಿ ಒಗ್ಗಟ್ಟಾಗಿದ್ದೇವೆ" ಎಂದರು.
ಇನ್ನು ಇಲಾಖೆಯಲ್ಲಿನ ಹಣ ವರ್ಗಾವಣೆ ವಿಚಾರವಾಗಿ ಸಿಎಂ ಗಮನಕ್ಕೆ ತಂದ ನಂತರವೇ ರಾಜ್ಯಪಾಲರಿಗೂ, ರಾಜ್ಯ ಉಸ್ತುವಾರಿಗಳಿಗೂ ಪತ್ರದಲ್ಲಿ ತಿಳಿಸಿದ್ದು, ಆ ಬಗ್ಗೆ ಆದಷ್ಟು ಬೇಗ ಪರಿಹರಿಸುವುದಾಗಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ" ಎಂದಿದ್ದಾರೆ.
"ಸಿದ್ದರಾಮಯ್ಯ ಮುಖ್ಯಮಂತ್ರಿ ಆಗೋ ಕನಸು ಕಾಣುತ್ತಾ ಇರೋದು ಹಗಲು ಕನಸು. ಅದು ನನಸಾಗೋದಿಲ್ಲ" ಎಂದು ಹೇಳಿದ್ದಾರೆ.