ಬೆಂಗಳೂರು, ಎ.03 (DaijiworldNews/MB) : ಚಿತ್ರಮಂದಿರ ಶೇ.50ರಷ್ಟು ಮಿತಿ ಆದೇಶವನ್ನು ರಾಜ್ಯ ಸರ್ಕಾರ ಸದ್ಯಕ್ಕೆ ವಾಪಾಸ್ ಪಡೆದಿದ್ದು ಏಪ್ರಿಲ್ 7ರವರೆಗೆ ಶೇ 100ರಷ್ಟು ಸೀಟುಗಳ ಭರ್ತಿಗೆ ಅವಕಾಶ ನೀಡಿದೆ.
ಈ ಬಗ್ಗೆ ಮರು ಆದೇಶ ಹೊರಡಿಸಿರುವ ಸರ್ಕಾರ, ಸದ್ಯಕ್ಕೆ ಈ ಆದೇಶವನ್ನು ಹಿಂಪಡೆದು ಏಪ್ರಿಲ್ 7ರವರೆಗೆ ಶೇ 100ರಷ್ಟು ಸೀಟುಗಳ ಭರ್ತಿಗೆ ಅವಕಾಶ ನೀಡಲಾಗುವುದು. ಏ.7ರ ನಂತರ ಶೇ.50ರಷ್ಟು ಭರ್ತಿಗೆ ಮಾತ್ರ ಅವಕಾಶ ಇರುತ್ತದೆ ಎಂದು ಹೇಳಿದೆ.
ಕೊರೊನಾ ನಿಯಂತ್ರಣಕ್ಕಾಗಿ ರಾಜ್ಯದ ಎಂಟು ಜಿಲ್ಲೆಗಳ ಚಿತ್ರಮಂದಿರಗಳಲ್ಲಿ ಗರಿಷ್ಠ ಶೇ 50 ಪ್ರೇಕ್ಷಕರಿಗಷ್ಟೇ ಅವಕಾಶ ನೀಡಲು ಆದೇಶಿಸಿದ ಶುಕ್ರವಾರ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಹೊರಡಿಸಿತ್ತು.
ಈ ಹಿನ್ನೆಲೆ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಸಚಿವರನ್ನು ಭೇಟಿ ಮಾಡಿದ್ದ "ಯುವರತ್ನ" ಚಿತ್ರತಂಡ ಅವರಿಗೆ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಟ್ಟಿತ್ತು. ಅಲ್ಲದೆ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜೈರಾಜ್ ಸಹ ಈ ಸಂಬಂಧ ಆಗ್ರಹಿಸಿದ್ದರು.