ಬೆಂಗಳೂರು, ಏ.04 (DaijiworldNews/HR): ನನಗೆ ಕೆ. ಮಂಜು ಅಂದ್ರೆ ಯಾರೂ ಎಂಬುದೇ ತಿಳಿದಿಲ್ಲ, ಯಾರ ಟೀಕೆಗಳ ಬಗ್ಗೆಯೂ ತಲೆ ಕೆಡಿಸಿಕೊಳ್ಳೋದಿಲ್ಲ, ಆರೋಗ್ಯ ಸಚಿವನಾಗಿ ಏನು ಮಾಡಬೇಕೋ ಅದನ್ನು ಮಾಡುತ್ತಿದ್ದೇನೆ. ಬದಲಾಗಿ ನಮಗೆ ಜನರ ರಕ್ಷಣೆ ಬಹಳ ಮುಖ್ಯ. ಟೀಕೆಗಳಿಗೆಲ್ಲಾ ತಲೆಕೆಡಿಸಿಕೊಳ್ಳೋದಿಲ್ಲ" ಎಂದು ನಿರ್ಮಾಪಕ ಕೆ ಮಂಜುಗೆ ಸಚಿವ ಕೆ ಸುಧಾಕರ್ ಟಾಂಗ್ ನೀಡಿದ್ದಾರೆ.
ಆರೋಗ್ಯ ಸಚಿವ ಸುಧಾಕರ್ ಖಾತೆ ಬದಲಾಯಿಸಿ ಎಂಬ ನಿರ್ಮಾಪಕ ಕೆ.ಮಂಜು ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, "ಸರ್ಕಾರ ಎಲ್ಲವನ್ನೂ ಸರಿದೂಗಿಸಬೇಕಾಗುತ್ತೆ. ಹಾಗಾಗಿ ಮುಖ್ಯಮಂತ್ರಿ ಚಿತ್ರರಂಗದ ಮನವಿಗೆ ಸ್ಪಂದಿಸಿದ್ದಾರೆ. ಇದು ತಪ್ಪು ಅಂತಾನೂ ಹೇಳೋದಿಲ್ಲ. ಆದರೆ ಈಗ ಕಠಿಣ ಕ್ರಮ ಕೈಗೊಳ್ಳದೇ ಇದ್ದಲ್ಲಿ ಮುಂದಿನ ದಿನಗಳಲ್ಲಿ ದೊಡ್ಡ ಸಮಸ್ಯೆ ಎದುರಿಸಬೇಕಾಗುತ್ತೆ" ಎಂದರು.
ಇನ್ನು "ಜಿಮ್ ಮಾಲೀಕರು, ಶಿಕ್ಷಣ ಸಂಸ್ಥೆಗಳಿಂದ ಒತ್ತಡ ಬರುತ್ತಿದ್ದು, ನಮಗೆ ಜನರ ಜೀವ, ಜೀವನೋಪಾಯ ಎರಡೂ ಮುಖ್ಯ" ಎಂದು ಹೇಳಿದ್ದಾರೆ.