ನವದೆಹಲಿ, ಏ.04 (DaijiworldNews/HR): ಭಾರತದಲ್ಲಿ ಕೊರೋನಾದ ಎರಡನೇ ಅಲೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಪ್ರಗತಿ ಪರಿಶೀಲನೆ ನಡೆಸಿದರು.
ಈ ಸಭೆಯಲ್ಲಿ ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳು, ಸಂಪುಟ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಆರೋಗ್ಯ ಇಲಾಖೆ ಕಾರ್ಯದರ್ಶಿಗಳು, ನೀತಿ ಆಯೋಗದ ಸದಸ್ಯ ವಿನೋದ್ ಪೌಲ್ ಸಭೆಯಲ್ಲಿ ಹಾಜರಿದ್ದಾರೆ.
ಇನ್ನು ದೇಶದಲ್ಲಿ ಶನಿವಾರ 93 ಸಾವಿರಕ್ಕೂ ಅಧಿಕ ಮಂದಿ ಸೋಂಕಿತರು ಪತ್ತೆಯಾಗಿದ್ದು, ಇದು ಅತ್ಯಂತ ಆತಂಕಕಾರಿಯಾಗಿದ್ದು, ಪ್ರಧಾನಿಯವರು ಇಂದು ತುರ್ತು ಸಭೆ ನಡೆಸಿ ಪರಿಸ್ಥಿತಿಯನ್ನು ಅವಲೋಕಿಸಿದರು.
ಇಂದು ದೇಶದಲ್ಲಿ 93 ಸಾವಿರದ 249 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಈ ವರ್ಷದಲ್ಲಿಯೇ ಇದುವರೆಗೆ ಕಂಡುಬಂದ ಕೇಸ್ ಗಳಲ್ಲಿ ಅಧಿಕವಾಗಿದೆ ಎನ್ನಲಾಗಿದೆ.