ದಾವಣಗೆರೆ, ಏ.04 (DaijiworldNews/HR): "ಕರ್ನಾಟಕದ ಬಿಜೆಪಿ ಸರ್ಕಾರ ಎಲ್ಲಾ ಹಿಂದುಳಿದ ಸಮಾಜಗಳ ಅಭಿವೃದ್ದಿಗೆ ಬದ್ಧವಾಗಿದೆ" ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಎಲ್ಲಾ ಸಮುದಾಯಗಳ ಅಭಿವೃದ್ದಿಗೆ ಸರ್ಕಾರ ಆದ್ಯತೆ ನೀಡಿದ್ದು, ಶೇ.50ರ ಮೀಸಲಾತಿ ಮಿತಿಯನ್ನು ಹೆಚ್ಚಿಸಲು ಸರ್ವೋಚ್ಛ ನ್ಯಾಯಾಲಯಕ್ಕೆ ಮನವಿ ಮಾಡಲಾಗಿದೆ" ಎಂದರು.
ಇನ್ನು "ಹಾಲುಮತ ಸಮಾಜವನ್ನು ಎಸ್ಟಿ ಮೀಸಲಾತಿ ವರ್ಗಕ್ಕೆ ಸೇರ್ಪಡೆಗೊಳಿಸುವ ನಿಟ್ಟಿನಲ್ಲಿ ಕುಲಶಾಸ್ತ ಅಧ್ಯಯನ ಸರ್ಕಾರ ಉನ್ನತ ಮಟ್ಟದ ಸಮಿತಿ ರಚಿಸಿದ್ದು, ವರದಿ ನಿರೀಕ್ಷಿಸಲಾಗುತ್ತಿದ್ದು, ಶ್ರೀಗಳ, ಸಮಾಜದ ಅಪೇಕ್ಷೆ ಪೂರೈಸಲು ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ" ಎಂದು ಹೇಳಿದ್ದಾರೆ.