ಕೊಡಗು, ಏ.04 (DaijiworldNews/HR): ಕೊರೊನಾ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಇಂದಿನಿಂದ ಏಪ್ರಿಲ್ 20ರವರೆಗೆ ಕೊಡಗು ಜಿಲ್ಲೆಯ ಎಲ್ಲಾ ಪ್ರವಾಸಿ ತಾಣಗಳನ್ನು ಬಂದ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಜಿಲ್ಲೆಯ ಎಲ್ಲಾ ಪ್ರವಾಸಿ ತಾಣಗಳಿಗೂ ಪ್ರವಾಸಿಗರು ಮತ್ತು ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಆದೇಶ ಹೊರಡಿಸಿದ್ದು, ಈ ಆದೇಶ ಉಲ್ಲಂಘನೆ ಮಾಡಿದವ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಕಟಣೆಯ ಮೂಲಕ ಎಚ್ಚರಿಕೆ ನೀಡಿದ್ದಾರೆ.
ಇನ್ನು ಬೇಸಿಗೆಯಲ್ಲಿ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಕೊಡಗು ಜಿಲ್ಲೆಗೆ ಆಗಮಿಸುತ್ತಿದ್ದು, ಇದೀಗ ಜಿಲ್ಲಾಧಿಕಾರಿಗಳ ಆದೇಶದಿಂದಾಗಿ ಎಲ್ಲದಕ್ಕೂ ಬ್ರೇಕ್ ಬಿದ್ದಂತಾಗಿದೆ.