ಬೆಂಗಳೂರು, ಏ.04 (DaijiworldNews/HR): ಸಿ.ಡಿ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ, ಡಿ ಸುಧಾಕರ್ ಅವರು ಪ್ರಕರಣದ ಸಂತ್ರಸ್ತೆಯ ಬ್ಯಾಂಕ್ಗೆ ಹಣ ವರ್ಗಾವಣೆ ಮಾಡಿದ್ದಾರೆ ಎಂಬ ಮಾಹಿತಿಯನ್ನು ಸಂಗ್ರಹಿಸಿದ್ದಾರೆ ಎಂದು ಹೇಳಲಾಗಿದೆ.
ಈ ಕುರಿತು ವಿಚಾರಣೆಗೆ ಹಾಜರಾಗಲು ಮತ್ತು ಅವರ ಬ್ಯಾಂಕ್ ಖಾತೆ ವಿವರಗಳನ್ನು ಹಾಜರುಪಡಿಸುವಂತೆ ಎಸ್ಐಟಿ ಅಧಿಕಾರಿಗಳು ಸುಧಾಕರ್ ಅವರನ್ನು ಕೇಳಿದ್ದು, ಮಾಜಿ ಸಚಿವರು ಕಳೆದ ಆರು ತಿಂಗಳಿನಿಂದ ಸಿಡಿಯಲ್ಲಿ ಮಹಿಳೆಯೊಂದಿಗೆ ಸಂಪರ್ಕ ಹೊಂದಿದ್ದರು ಎಂದು ವರದಿಯಾಗಿದೆ.
ಆರ್ಟಿ ನಗರ ಶಾಖೆಯಲ್ಲಿ ಸಂತ್ರಸ್ತೆಯ ಬ್ಯಾಂಕ್ ಖಾತೆಗೆ ಹಣವನ್ನು ವರ್ಗಾಯಿಸಲಾಗಿದೆ ಎಂಬ ಮಾಹಿತಿಯನ್ನು ಎಸ್ಐಟಿ ಅಧಿಕಾರಿಗಳು ಸಂಗ್ರಹಿಸಿದ್ದಾರೆ. ಆದ್ದರಿಂದ ಏಪ್ರಿಲ್ 7 ರ ಬುಧವಾರದ ಮೊದಲು ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ಹೇಳಿದೆ.
ಆದರೆ, ಸುಧಾಕರ್ ಅವರು ಈ ಪ್ರಕರಣದಲ್ಲಿ ನನ್ನ ಹೆಸರು ಕೇಳಿ ಬಂದಿದ್ದು ಆಶ್ಚರ್ಯ ಮೂಡಿಸಿದೆ. ಯುವತಿಗೆ ನಾನು ಹಣ ವರ್ಗಾವಣೆ ಮಾಡಿದ್ದೇನೆ ಎಂದು ಹೇಳಿರುವುದು ಸುಳ್ಳು. ನಾನು ಯಾರಿಗೂ ಹಣ ನೀಡಿಲ್ಲ. ನಾನು ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಅವರೊಂದಿಗೆ ಸಂಪರ್ಕದಲ್ಲಿ ಇರುವ ಕಾರಣಕ್ಕೆ ಹೀಗೆ ಸಿಲುಕಿಸಲಾಗುತ್ತಿದೆ'' ಎಂದು ಹೇಳಿದ್ದಾರೆ.