ನವದೆಹಲಿ, ಏ.05 (DaijiworldNews/HR): ನಮ್ಮ ಭಾರತೀಯ ಯೋಧರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ, ನಕ್ಸಲರ ವಿರುದ್ಧ ದೊಡ್ದ ಮಟ್ಟದ ಕಾರ್ಯಾಚರಣೆಗೆ ಸಜ್ಜಾಗಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾರತೀಯ ಸೇನೆಗೆ ಕರೆ ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, "ಮಾವೋವಾದಿಗಳ ವಿರುದ್ಧ ಹೋರಾಟದಲ್ಲಿ ಹುತಾತ್ಮರಾದ ನಮ್ಮ ಭದ್ರತಾ ಸಿಬ್ಬಂದಿಯ ತ್ಯಾಗಕ್ಕೆ ನಾನು ತಲೆಬಾಗುತ್ತೇನೆ. ರಾಷ್ಟ್ರವು ಅವರ ಶೌರ್ಯವನ್ನು ಎಂದಿಗೂ ಮರೆಯುವುದಿಲ್ಲ. ಮೃತ ಯೋಧರ ಕುಟುಂಬಗಳಿಗೆ ದೇವರು ಸಾವಿನ ನೋವು ತಡೆಯುವ ಶಕ್ತಿ ನೀಡಲಿ. ಶಾಂತಿ ಮತ್ತು ಪ್ರಗತಿಗೆ ವಿರುದ್ಧವಾಗಿರುವ ಈ ಶತ್ರುಗಳ ವಿರುದ್ಧ ನಾವು ನಮ್ಮ ಹೋರಾಟವನ್ನು ಮುಂದುವರಿಸುತ್ತೇವೆ. ಗಾಯಗೊಂಡವರು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ" ಎಂದರು.
ಇನ್ನು "ಛತ್ತೀಸ್ ಘಡದಲ್ಲಿ ನಡೆದ ನಕ್ಸಲರ ದಾಳಿಯಲ್ಲಿ ಭದ್ರತಾ ಸಿಬ್ಬಂದಿ ಜೀವ ಕಳೆದುಕೊಂಡಿದ್ದಾರೆ. ಛತ್ತೀಸ್ ಘಡದಲ್ಲಿ ನಕ್ಸಲರ ದಾಳಿಗೆ ತಕ್ಕ ಪ್ರತ್ಯುತ್ತರವನ್ನು ಸಕಾಲದಲ್ಲಿ ನೀಡಲಿದ್ದೇವೆ" ಎಂದು ಹೇಳಿದ್ದಾರೆ.