ಹಾಸನ, ಏ.05 (DaijiworldNews/HR): ಹಾಸನದ ಹೊಳೆ ನರಸೀಪುರ ತಾಲೂಕಿನ ಚಾಕೇನಹಳ್ಳಿ ಗ್ರಾಮದ ಸಮೀಪದಲ್ಲಿನ ಸ್ಫೋಟಕಗಳ ಗೋದಾಮಿನಲ್ಲಿ ಸ್ಫೋಟ ಸಂಭವಿಸಿ ಇಬ್ಬರು ಮೃತಪಟ್ಟು, ಒಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ.
ಸಾಂಧರ್ಭಿಕ ಚಿತ್ರ
ಮೃತಪಟ್ಟವರನ್ನು ಚನ್ನರಾಯಪಟ್ಟಣದ ಶ್ರವಣಬೆಳಗೊಳದ ಬೆಟ್ಟದಹಳ್ಳಿ ಗ್ರಾಮದ ಸಂಪತ್ತು ಮತ್ತು ನಟರಾಜು ಎಂದು ಗುರುತಿಸಲಾಗಿದೆ.
ಈ ಕುರಿತು ಐಸಿಪಿ ಪ್ರವೀಣ್ ಕುಮಾರ್ ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ಘಟನೆ ಹಿಂದಿನ ಕಾರಣದ ಕುರಿತು ತನಿಖೆ ಕೈಗೊಂಡಿದ್ದಾರೆ.
ಗಾಯಗೊಂಡವರಿಗೆ ಅಗತ್ಯ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಲಾಗಿದೆ. ಇನ್ನು ಮುಂದೆ ಸ್ಪೋಟಕಗಳನ್ನು ದಾಸ್ತಾನು, ಸಾಗಣೆ ಮಾಡುವಾಗ ಜಾಗರೂಕರಾಗಿರುವಂತೆ ಮನವಿ ಮಾಡುತ್ತೇನೆ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಟ್ವೀಟ್ ಮಾಡಿದ್ದಾರೆ.