ನವದೆಹಲಿ, ಎ.05 (DaijiworldNews/PY): "ವಿದ್ಯಾರ್ಥಿಗಳ ಜೊತೆಗಿನ ಪರೀಕ್ಷಾ ಪೇ ಚರ್ಚಾ ವಾರ್ಷಿಕ ಸಂವಾದ ಕಾರ್ಯಕ್ರಮವನ್ನು ಎಪ್ರಿಲ್ 7ರ ಬುಧವಾರದಂದು ಹೊಸ ಸ್ವರೂಪದಲ್ಲಿ ನಡೆಸಲಾಗುವುದು" ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, "ಈ ಬಾರಿಯ ಪರೀಕ್ಷಾ ಪೇ ಚರ್ಚೆಯ ಸಂದರ್ಭ ಹೊಸ ಸ್ವರೂಪ, ವ್ಯಾಪಕ ಶ್ರೇಣಿಯ ವಿಷಯಗಳ ಕುರಿತು ಹಲವಾರು ಆಸಕ್ತಿದಾಯಕ ಪ್ರಶ್ನೆಗಳ ಹಾಗೂ ಎಕ್ಸಾಂ ವಾರಿಯರ್ಸ್, ಪೋಷಕರು ಹಾಗೂ ಶಿಕ್ಷಕರ ಜೊತೆ ಸ್ಮರಣೀಯ ಚರ್ಚೆ ನಡೆಸಲಾಗುವುದು" ಎಂದು ಹೇಳಿದ್ದಾರೆ.
"ಎಪ್ರಿಲ್ 7ರಂದು ರಾತ್ರಿ 7 ಗಂಟೆಗೆ ಈ ಕಾರ್ಯಕ್ರಮವು ಪ್ರಸಾರವಾಗಲಿದೆ" ಎಂದು ತಿಳಿಸಿದ್ದಾರೆ.
ಕೊರೊನಾ ದೃಷ್ಟಿಯಿಂದ ಈ ಬಾರಿಯ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮವನ್ನು ಆನ್ಲೈನ್ ಮೂಲಕ ನಡೆಸಲಾಗುವುದು ಎಂದು ಸರ್ಕಾರ ಫೆಬ್ರವರಿಯಲ್ಲಿ ತಿಳಿಸಿತ್ತು.